ಚೈತ್ರಾ ಕುಂದಾಪುರ ಮತ್ತು ಆಕೆಯ ಗಂಡ ಇಬ್ಬರೂ ಕಳ್ಳರು: ಮಗಳ ವಿರುದ್ಧ ತಂದೆಯಿಂದ ಗಂಭೀರ ಆರೋಪ

ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ(Chaithra Kundapura) ಇತ್ತೀಚೆಗೆ ತಾನು ಪ್ರೀತಿಸಿದ ಯುವಕ ಶ್ರೀಕಾಂತ್ ಜೊತೆಗೆ ವಿವಾಹವಾಗಿದ್ದರು. ಅವರ ವಿವಾಹದ ಬೆನ್ನಲ್ಲೇ ಈ ಮದುವೆಗೆ ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಚೈತ್ರಾ ಕುಂದಾಪುರ ಹಾಗೂ ಆಕೆಯ ಪತಿ ಶ್ರೀಕಾಂತ್ ಬಗ್ಗೆ ಹಲವು ಆರೋಪಗಳನ್ನು ಮಾಡಿದ್ದಾರೆ.
ಚೈತ್ರಾ ಹಾಗೂ ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲರೂ ಹಣದಾಸೆಗೆ ಹೀಗೆ ಮಾಡುತ್ತಿದ್ದಾರೆ. ನಾನು ಹಾಗೂ ನನ್ನ ದೊಡ್ಡ ಮಗಳು ಸತ್ಯ ಧರ್ಮ ನ್ಯಾಯದಿಂದ ಬದುಕುತ್ತಿದ್ದೇವೆ ಎಂದು ಹೇಳಿದ್ದಾರೆ.
ಚೈತ್ರಾ ಕುಂದಾಪುರಗೆ ಯಾರೂ ದೊಡ್ಡ ಸ್ಥಾನಮಾನ ಕೊಡಬೇಡಿ, ತಂದೆಯನ್ನು ದೂರವಿಟ್ಟವಳು ಸಂಸ್ಕೃತಿ ಬಗ್ಗೆ ಮಾತನಾಡುವುದು ಎಷ್ಟು ಸರಿ? ಆಕೆ ಸೈನಿಕರಿಗೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಸ್ವಂತ ಹಣದಲ್ಲಿ ಕೊಟ್ಟಿದ್ದರೆ ಸರಿ, ಮೋಸದ ಹಣದಲ್ಲಿ ಕೊಟ್ಟರೆ ಪ್ರಯೋಜನ ಏನು? ಎಂದು ಅವರು ಪ್ರಶ್ನಿಸಿದ್ದಾರೆ.
ನನಗೆ ನನ್ನ ದೊಡ್ಡ ಮಗಳು ಆಸರೆ, ಚೈತ್ರಾ ಬಿಗ್ ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನ ಪತ್ನಿ ನನ್ನನ್ನು ಜಗುಲಿಯಲ್ಲಿ ಬಿಟ್ಟು ಮನೆಗೆ ಬೀಗ ಹಾಕಿ ಬಿಗ್ ಬಾಸ್ ಗೆ ಹೋಗಿದ್ದಳು. ನಾನು ಕಟ್ಟಿದ ಮನೆಯಲ್ಲಿ ನಾನು ಅನಾಥವಾಗಿದ್ದೇನೆ ಎಂದು ಅವರು ಹೇಳಿದ್ದಾರೆ.
ಚೈತ್ರಾಳ ಮದುವೆಗೆ ನನಗೆ ಆಮಂತ್ರಣ ಕೂಡ ನೀಡಿಲ್ಲ, ಮದುವೆ ಸಂದರ್ಭದಲ್ಲಿ ನ್ನ ಬಳಿ ಹಣ ಕೇಳಿದರು, ನಾನು ಹೊಟೇಲ್ ನಲ್ಲಿ ಕೆಲಸ ಮಾಡುವ ಸಾಮಾನ್ಯ ನೌಕರ ಎಂದು ಅವರು ಹೇಳಿಕೊಂಡಿದ್ದಾರೆ. ನನ್ನ ದೊಡ್ಡ ಮಗಳು ಟೀಚರ್ ಆಗಿ, ಹೊಲಿಗೆ ಮಾಡಿಕೊಂಡು ಗೌರವಾನ್ವಿತ ರೀತಿಯಲ್ಲಿ ಬದುಕುತ್ತಿದ್ದಾಳೆ. ದೊಡ್ಡ ಮಗಳ ಮೇಲೂ ಚೈತ್ರಾ ಸುಳ್ಳು ಅಪವಾದ ಹಾಕಿದ್ದಳು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಬಿಗ್ ಬಾಸ್ ವೇದಿಕೆಯಲ್ಲಿ ನಾನೇ ಮನೆ ನಡೆಸುವವಳು ಎಂಬಂತೆ ಬಿಂಬಿಸಿಕೊಂಡಿದ್ದಾಳೆ. ಗೋವಿಂದ ಪೂಜಾರಿ ಪ್ರಕರಣದಲ್ಲೂ ಈಕೆ ಹಣ ಹೊಡೆದಿದ್ದಾಳೆ. ಬೇರೆ ಬೇರೆ ಬ್ಯಾಂಕ್ ಗಳಲ್ಲಿ ಪಡ್ಡೆ ಹುಡುಗರ ಹೆಸರಿನಲ್ಲಿ ಡೆಪಾಸಿಟ್ ಮಾಡಿ ಬಾಂಡ್ ಮೇಲೆ ಸಾಲ ಪಡೆದಿದ್ದಳು. ನನ್ನ ಮಗಳು ಎಂದು ಹೇಳಲು ನನಗೆ ನಾಚಿಕೆಯಾಗುತ್ತದೆ. ತಂದೆ ಇಲ್ಲದ ಮಗಳು ಎಂದು ಹೇಳಿಕೊಂದು ಬರುತ್ತಿದ್ದಾಳೆ. ತಂದೆಗೆ ಅನ್ನ ಹಾಕದವಳು ಏನು ದೇಶ ಸೇವೆ ಮಾಡುತ್ತಾಳೆ? ನನ್ನ ಹೆಂಡತಿಗೂ ಹಣಕೊಟ್ಟಿದ್ದಾಳೆ, ಅವಳಿಗೂ ಗಂಡ ಬೇಡ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: