ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಚೈತ್ರಾ ಕುಂದಾಪುರ

chaithra kundapur
18/09/2023

ಬೆಂಗಳೂರು:ಸೆ:ಕಳೆದ ಮೂರು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರಳನ್ನು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.

ಎಲ್ಲಾ ವರದಿಗಳು ನಾರ್ಮಲ್‌ ಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಿದ್ದು, ಅಲ್ಲಿಂದ ನೇರವಾಗಿ ಪೊಲೀಸರು ಸಿಸಿಬಿ ಕಚೇರಿಗೆ ಮುಖಕ್ಕೆ ತಲೆಗೆ ಮಾಸ್ಕ್ ಹಾಕಿ ಆಸ್ಪತ್ರೆಯ ಹಿಂಬಾಗಿಲಿನಿಂದ ಕರೆತಂದಿದ್ದಾರೆ.

ಐದಾರು ದಿನಗಳ ಕಾಲ ಕಸ್ಟಡಿಯಲ್ಲಿ ವಿಚಾರಣೆ ನಡೆಸಿ, ನಂತರ ಸ್ಥಳ ಮಹಜರು ನಡೆಸಬೇಕು. ಬಳಿಕ ಉಳಿದ ಆರೋಪಿಗಳನ್ನೂ ಚೈತ್ರಾಳ ಮುಖಾಮುಖಿಯಾಗಿ ಕೂರಿಸಿ ವಿಚಾರಣೆ ನಡೆಸಲು ಎಂದು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version