6:53 PM Saturday 15 - November 2025

ಚೈತ್ರಾ ಕುಂದಾಪುರ ಗೆಳೆಯ ಶ್ರೀಕಾಂತ್ ವಿರುದ್ಧ ಮತ್ತೊಂದು  ಸೆಕ್ಷನ್‌ ದಾಖಲು

shri kanth
16/09/2023

ಬೆಂಗಳೂರು: ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಗೆಳೆಯ ಶ್ರೀಕಾಂತ್ ವಿರುದ್ಧ ಮತ್ತೊಂದು  ಸೆಕ್ಷನ್‌ ದಾಖಲು ಮಾಡಲಾಗಿದೆ.

ಬಂಡೆಪಾಳ್ಯ ಠಾಣೆಯಲ್ಲಿ ಸಿಸಿಬಿ ಪೊಲೀಸರು ಐಪಿಸಿ ಸೆಕ್ಷನ್ 201 ಹೊಸದಾಗಿ ಸೇರ್ಪಡೆ ಮಾಡಿದ್ದಾರೆ. ಸಿಸಿಬಿ ತನಿಖೆ ವೇಳೆ ಆರೋಪಿಗಳ ಇಬ್ಬರ ಮೊಬೈಲ್ ಪೋನ್ ತಡಕಾಡಿದ ಸಿಸಿಬಿಗೆ ಮೊಬೈಲ್‌ನಲ್ಲಿರುವ ದತ್ತಾಂಶ ನಾಶವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಹಾಗಾಗಿ ಆರೋಪಿಗಳ ವಿರುದ್ಧ ಸಾಕ್ಷಿ ನಾಶ ಆರೋಪದ ಮೇಲೆ ಮತ್ತೊಂದು ಸೆಕ್ಷನ್ ಸೇರಿಸಲಾಗಿದೆ.

ವಂಚನೆ ಪ್ರಕರಣ ಸಂಬಂಧ ಎಫ್‌ ಐಆರ್ ಆಗುತ್ತಿದ್ದಂತೆ ಶ್ರೀಕಾಂತ್ ಹಾಗೂ ಚೈತ್ರಾ ನಡುವೆ ನಡೆದಿರುವ ಸಂಭಾಷಣೆಗಳನ್ನು ನಾಶ ಮಾಡಲಾಗಿದೆ.  ಶ್ರೀಕಾಂತ್ ಮೊಬೈಲ್ ಸಂಪೂರ್ಣ ನಾಶ ಮಾಡಲಾಗಿದೆ.

ಇತ್ತೀಚಿನ ಸುದ್ದಿ

Exit mobile version