ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ - Mahanayaka
4:59 PM Thursday 16 - October 2025

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

murder
04/03/2022

ಕಲಬುರಗಿ: ನಗರದ ಪಿಎನ್​ಟಿ ಕ್ವಾಟರ್ಸ್ ಬಳಿ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದಿರುವ ಘಟನೆ ತಡರಾತ್ರಿ‌ ನಡೆದಿರುವ ಬಗ್ಗೆ ವರದಿಯಾಗಿದೆ.


Provided by

ಪಿಎನ್​ಟಿ ಕ್ವಾಟರ್ಸ್ ನಿವಾಸಿ ಪ್ರೀತಂ ಬನ್ನಿಕಟ್ಟಿ ಕೊಲೆಯಾದ ವ್ಯಕ್ತಿ. ಈತನನ್ನು ಕಳೆದ ರಾತ್ರಿ ಕೆಲವು ದುಷ್ಕರ್ಮಿಗಳು ಫಾಲೋ ಮಾಡಿಕೊಂಡು ಬಂದು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಪ್ರೀತಂ ಕೆಲವು ತಿಂಗಳ ಹಿಂದಷ್ಟೇ ಅನ್ಯ ಧರ್ಮದ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದ ಎನ್ನಲಾಗಿದ್ದು, ಈ ಹಿನ್ನೆಲೆ ಕೊಲೆ ಮಾಡಿದಿರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ‌.

ಈ ಘಟನೆ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ‌.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸ್ಕ್ರೂಡ್ರೈವರ್​ನಿಂದ ಚುಚ್ಚಿ ಪತ್ನಿಯ ಕೊಲೆಗೈದ ಪತಿ

ರಷ್ಯಾದ 7000 ಯೋಧರ ಸಾವು: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ

ಬೆಂಕಿ ಅವಘಡ : ಪತಿ ಸಾವು, ಪತ್ನಿ ಗಂಭೀರ

ಸರ್ಕಾರ ಸರಿಯಾದ ನಿರ್ಧಾರ ತೆಗೆದುಕೊಂಡಿಲ್ಲ: ಕೇಂದ್ರದ ವಿರುದ್ಧ ಉಕ್ರೇನ್‌ ನಿಂದ ಮರಳಿದ ವಿದ್ಯಾರ್ಥಿಗಳು ಆಕ್ರೋಶ

ಇತ್ತೀಚಿನ ಸುದ್ದಿ