ಚಾಮರಾಜನಗರ ಎಡಿಸಿ ಸಹಿ ಫೋರ್ಜರಿ ಮಾಡಿ ಕೋಟಿ ಗುಳುಂ: ಡಿ ಗ್ರೂಪ್ ನೌಕರ ಅಂದರ್
ಚಾಮರಾಜನಗರದ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಆನಂದ್ ಅವರ ಹೆಸರನ್ನು ಫೋರ್ಜರಿ ಮಾಡಿ 1 ಕೋಟಿಗೂ ಅಧಿಕ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರ ಎಡಿಸಿ ಕಚೇರಿಯ ಡಿ ಗ್ರೂಪ್ ನೌಕರ ರಾಜೇಶ್ ಫೋರ್ಜರಿ ಮಾಡಿರುವ ಆರೋಪಿ. ಜಿಲ್ಲಾಧಿಕಾರಿ ಅವರ ಗ್ರಾಮೀಣ ರಸಪ್ರಶ್ನೆ ಕಾರ್ಯಕ್ರಮದ ಬ್ಯಾಂಕ್ ಖಾತೆಯಿಂದ ಎಡಿಸಿ ಸಹಿಯನ್ನು ರಾಜೇಶ್ ಫೋರ್ಜರಿ ಮಾಡಿ 1 ಕೋಟಿ ರೂ. ಅಧಿಕ ಹಣವನ್ನು ತನ್ನ ಖಾತೆಗೆ ಮತ್ತು ಇತರರ ಖಾತೆಗೆ ಈತ ವರ್ಗಾವಣೆ ಮಾಡಿದ್ದಾನೆ ಎನ್ನಲಾಗಿದೆ.
ಪ್ರಕರಣದ ಸಂಬಂಧ ಬೇಜವಾಬ್ದಾರಿ ತೋರಿದ್ದ ದ್ವಿತೀಯ ದರ್ಜೆ ಸಹಾಯಕಿ ಸೌಮ್ಯ ಅವರನ್ನು ಡಿಸಿ ಅಮಾನತು ಮಾಡಿದ್ದಾರೆ. 2021 ರಿಂದಲೂ ಈ ಅವ್ಯವಹಾರ ನಡೆಯುತ್ತಿದೆ ಎನ್ನಲಾಗಿದ್ದು ಇಷ್ಟು ವರ್ಷಗಳಾದರೂ ಆಡಿಟ್ ನಲ್ಲಿ ಇದು ಬೆಳಕಿಗೆ ಬರಲಿಲ್ಲವೇ?? ಜೊತೆಗೆ ಒಬ್ಬ ಡಿ ಗ್ರೂಪ್ ನೌಕರನಷ್ಟೇ ಈ ಅವ್ಯವಹಾರ ನಡೆಸಿದನೇ ಬೇರೆಯವರ ಕುಮ್ಮಕ್ಕು ಇಲ್ಲವೇ ಎಂಬ ಸಾಕಷ್ಟು ಅನುಮಾನಗಳು ಎದ್ದಿವೆ.
ಸದ್ಯ, ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಆರೋಪಿ ರಾಜೇಶ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಎಲ್ಲಾ ಆಯಾಮದಿಂದಲೂ ತನಿಖೆ ನಡೆಸಲಾಗುತ್ತಿದೆ, ತನಿಖೆ ಪೂರ್ಣಗೊಂಡ ಬಳಿಕ ಅವ್ಯವಹಾರದ ಆಳ-ಅಗಲ ತಿಳಿಯಲಿದೆ ಎಂದು ಚಾಮರಾಜನಗರ ಎಸ್ಪಿ ಪದ್ಮಿನಿ ಸಾಹೊ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























