ಚಾಮರಾಜನಗರ: ಕರ್ನಾಟಕ ಬಂದ್ ಹಿನ್ನೆಲೆ: ಶಾಲಾ ಕಾಲೇಜುಗಳಿಗೆ ರಜೆ, ಗುಂಡ್ಲುಪೇಟೆ ಎಪಿಎಂಸಿಗೆ ರಜೆ ಘೋಷಣೆ

ಚಾಮರಾಜನಗರ: ಸೆ.29ರಂದು ಕರ್ನಾಟಕ ಬಂದ್ ಪ್ರಯುಕ್ತ ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ(ಎಪಿಎಂಸಿ)ಗೆ ರಜೆ ಘೋಷಣೆ ಮಾಡಲಾಗಿದೆ.
ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ವರ್ತಕರು, ದಲ್ಲಾಳಿಗಳು ಹಾಗೂ ಕೂಲಿ ಕಾರ್ಮಿಕರು ಸೆ.29ರ ಕರ್ನಾಟಕ ಬಂದ್‍ಗೆ ಬೆಂಬಲ ಸೂಚಿಸುವ ಹಿನ್ನೆಲೆ ಮಾರುಕಟ್ಟೆಗೆ ರಜೆ ಘೋಷಣೆ ಮಾಡಬೇಕು ಎಂದು ಮನವಿ ಸಲ್ಲಿಸಿದ ಹಿನ್ನಲೆ ಎಪಿಎಂಸಿ ಕಾರ್ಯದರ್ಶಿ ಎಸ್.ಶ್ರೀಧರ್ ಸೆ.29ರಂದು ರಜೆ ಘೋಷಣೆ ಮಾಡಿ ಪ್ರಕಟಣೆ ಹೊರಡಿಸಿದ್ದಾರೆ. ಜೊತೆಗೆ ರಜೆ ಕಾರಣ ಶುಕ್ರವಾರ ಯಾವುದೇ ರೈತರು ಮಾರುಕಟ್ಟೆಗೆ ಹಣ್ಣು, ತರಕಾರಿ ತರದಂತೆ ಮನವಿ ಮಾಡಿದ್ದಾರೆ.
ಹಲವು ಸಂಘಟನೆ ಬೆಂಬಲ:
ಕರ್ನಾಟಕ ಬಂದ್ ಗೆ ಗುಂಡ್ಲುಪೇಟೆ ತಾಲೂಕು ಕೇಂದ್ರದಲ್ಲೂ ಉತ್ತಮ ಬೆಂಬಲ ವ್ಯಕ್ತವಾಗಿದ್ದು ರೈತ ಸಂಘಟನೆ ಹಾಗೂ ವಿವಿಧ ಪ್ರಗತಿಪರ ಮತ್ತು ಕನ್ನಡ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ.
ರೈತ ಸಂಘ, ಕರವೇ(ಪ್ರವೀಣ್ ಶೆಟ್ಟಿ ಬಣ), ಮಾನವ ಹಕ್ಕುಗಳ ಸಮಿತಿ, ಮಾನವ ಬಂಧುತ್ವ ವೇದಿಕೆ, ಕಾವಲು ಪಡೆ ಸಂಘಟನೆ, ಎಸ್‍ಡಿಪಿಐ ಸಂಘಟನೆ, ಬಿಎಸ್‍ಪಿ ಮತ್ತು ವೈಭವ ಕರ್ನಾಟಕ ಸೇರಿಂತೆ ವಿವಿಧ ಪ್ರಗತಿ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿದ್ದಾರೆ.
ಚಾಮರಾಜನಗರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ:
ಕರ್ನಾಟಕ ಬಂದ್ ಹಿನ್ನೆಲೆ ಚಾಮರಾಜನಗರದಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಂದ ಆದೇಶ ನೀಡಿದ್ದಾರೆ.
ಕಾವೇರಿ ಹೋರಾಟ ಕ್ರಿಯಾ ಸಮಿತಿಯಿಂದ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಚಾಮರಾಜನಗರ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.