ಶಾಲಾ ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆಯ ಸೆರೆ

chamarajanagara.png
02/08/2023

ಚಾಮರಾಜನಗರ: ಶಾಲಾ ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಯಳಂದೂರು ತಾಲೂಕು ಕುಂತೂರು ಬೆಟ್ಟದ ಬಳಿ ಸೆರೆ ಹಿಡಿಯಲಾಗಿದೆ.

ಅಂದಾಜು 6 ವರ್ಷದ ಗಂಡು ಚಿರತೆ ಅರಣ್ಯಾಧಿಕಾರಿಗಳ ಬೋನಿಗೆ ಬಿದ್ದಿದೆ. ಬಾಲಕನ ಮೇಲೆ ಚಿರತೆ ದಾಳಿ ನಡೆಸಿದಂದಿನಿಂದಲೂ ಮಕ್ಕಳು ಶಾಲೆಗೆ ತೆರಳಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಚಿರತೆ ಭೀತಿಯ ಹಿನ್ನೆಲೆಯಲ್ಲಿ ಶಾಲೆಯ ಮುಂದೆ ಸಿಬ್ಬಂದಿ ನಿಯೋಜನೆ ಮಾಡಿ ಅರಣ್ಯ ಇಲಾಖೆ ಬಂದೋಬಸ್ತ್ ಮಾಡಿತ್ತು. ಚಿರತೆಯನ್ನು ಬೇಗನೇ ಸೆರೆಹಿಡಿಯುವಂತೆ  ಮಲ್ಲಿಗೆಹಳ್ಳಿ ಹಾಗೂ 6-7  ಗ್ರಾಮದ ಜನತೆ ಒತ್ತಾಯಿಸಿದ್ದರು. ಇದೀಗ ಚಿರತೆಯನ್ನು ಸೆರೆ ಹಿಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version