5:32 PM Wednesday 20 - August 2025

ಚಾಮರಾಜನಗರ ಡಿಸಿ ಎಂ.ಆರ್.ರವಿ ಸುಳ್ಳು ಆರೋಪ ಮಾಡಿದ್ದಾರೆ | ರೋಹಿಣಿ ಸಿಂಧೂರಿ ಆಕ್ರೋಶ

rohini sindhuri
05/05/2021

ಮೈಸೂರು: ಚಾಮರಾಜನಗರ ಡಿಸಿ ಸರಿಯಾಗಿ ನಿರ್ವಹಣೆ ಮಾಡದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಈ ರೀತಿ ಆಗಿದ್ದರೆ ಯಾರನ್ನಾದರೂ ಹೇಗಾದರೂ ಸಂಪರ್ಕಿಸಿ ಆಕ್ಸಿಜನ್ ಪಡೆಯುತ್ತಿದ್ದೆವು. ಅವರು ಆ ಕೆಲಸ ಮಾಡಿಲ್ಲ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವು ಜನರ ಪ್ರಾಣ ಉಳಿಸಲು 24 ಗಂಟೆ ಕೆಲಸ ಮಾಡುತ್ತಿದ್ದೇವೆ. ಅಷ್ಟು ಕೆಲಸ ಮಾಡಿದರೂ ಈ ರೀತಿ ಹೇಳಿದರೆ ನಮಗೂ ನೋವಾಗುತ್ತದೆ‌.  ಆಕ್ಸಿಜನ್ ಸಪ್ಲೈ ವಿಚಾರದಲ್ಲಿ ಚಾಮರಾಜನಗರ ಡಿಸಿ ಸುಳ್ಳು ಆರೋಪ ಮಾಡಿದ್ದಾರೆ. ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಮಾಧ್ಯಮಗಳಿಗೆ ಹೇಳಿಕೆ ನೀಡಿ ಆರೋಪ ಮಾಡಿದ್ದಾರೆ. ಮೈಸೂರು ಡಿಸಿಯಾಗಿರುವ ನಾನು ಚಾಮರಾಜನಗರಕ್ಕಾಗಲಿ ಅಥವಾ ಇನ್ಯಾವುದೇ ಜಿಲ್ಲೆಗೆ ಆಕ್ಸಿಜನ್ ಸರಬರಾಜು ತಡೆದಿಲ್ಲ. ಯಾವುದೇ ಜಿಲ್ಲೆಗೆ ಆಕ್ಸಿಜನ್ ಸರಬರಾಜು ಅಲ್ಲಿನ ಸರಬರಾಜುದಾರರು ಹಾಗೂ ಜಿಲ್ಲಾಡಳಿತ ನಡುವಿನ ಸಂವಹನ ಇರುತ್ತೆ.ಈಗ ಮೈಸೂರಿಗೆ ಬಳ್ಳಾರಿಯಿಂದ ಕಡಿಮೆ ಆಕ್ಸಿಜನ್ ಸಪ್ಲೈ ಆದರೆ ನಾನು ಬಳ್ಳಾರಿ ಡಿಸಿಯನ್ನು ದೂಷಿಸಲು ಸಾಧ್ಯವಿಲ್ಲ.ತಮ್ಮ ಜಿಲ್ಲೆಗೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳೋದು ಅವರದ್ದೇ ಜವಾಬ್ದಾರಿ
ಎಂದು ರೋಹಿಣಿ ಸಿಂಧೂರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳಿಂದ ಪರಿಸ್ಥಿತಿ ನಿಯಂತ್ರಣ ಸಾಧ್ಯವಾಗದಿದ್ದರೆ, ಮೇಲಾಧಿಕಾರಿಯನ್ನು ಸಂಪರ್ಕಿಸಬೇಕು. ಆದರೆ, ಅದರಲ್ಲಿ ವಿಫಲವಾಗಿರುವ ಚಾಮರಾಜನಗರದವರು ಈಗ ಮೈಸೂರಿನ ಮೇಲೆ ದೂಷಿಸುತ್ತಿದ್ದಾರೆ. ರಾಜ್ಯ ಸರ್ಕಾರ ಆದೇಶಿಸಿರುವ ವಿಚಾರಣೆಯಲ್ಲಿ ಇದೆಲ್ಲವು ಸಾಬೀತಾಗಲಿದೆ ಎಂದು ಮೈಸೂರು ಡಿಸಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಈ ಜೊತೆಗೆ ಮೇ 2 ಮತ್ತು 3 ರಂದು ಚಾಮರಾಜನಗರಕ್ಕೆ ಕಳುಹಿಸಿದ ಆಕ್ಸಿಜನ್ ದಾಖಲೆ ಬಿಡುಗಡೆ ಮಾಡಿದ್ದಾರೆ. ಸಮಯ ಹಾಗೂ ಬಿಲ್ ಸಂಖ್ಯೆಯ ಜೊತೆಗೆ ಮಾಹಿತಿ ಬಹಿರಂಗ ಮಾಡಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version