ಅಂತ್ಯಕ್ರಿಯೆ ಮುಗಿಸಿ ವಾಪಸ್ಸಾಗುವಾಗ ಆಟೋದಿಂದ ಬಿದ್ದು ಮಹಿಳೆ ಸಾವು - Mahanayaka
3:29 AM Saturday 18 - October 2025

ಅಂತ್ಯಕ್ರಿಯೆ ಮುಗಿಸಿ ವಾಪಸ್ಸಾಗುವಾಗ ಆಟೋದಿಂದ ಬಿದ್ದು ಮಹಿಳೆ ಸಾವು

honnuru accident
16/12/2022

ಚಾಮರಾಜನಗರ: ಅಂತ್ಯಕ್ರಿಯೆ ಮುಗಿಸಿಕೊಂಡು ಹಿಂತಿರುಗುವಾಗ ಆಟೋದಿಂದ ಬಿದ್ದು ಮಹಿಳೆ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ಸಮೀಪ ನಡೆದಿದೆ.


Provided by

ಹೊನ್ನೂರು ಗ್ರಾಮದ ದೊಡ್ಡಮ್ಮ(49) ಮೃತ ದುರ್ದೈವಿ. ಗ್ರಾಮದಲ್ಲಿ ಚಾಮುಂಡಮ್ಮ ಎಂಬ ಮಹಿಳೆ ವಯೋಸಹಜ ಮೃತಪಟ್ಟಿದ್ದರು. ಇವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಇದೆ ಗ್ರಾಮದ ದೊಡ್ಡಮ್ಮ ಬಂದಿದ್ದರು. ಗ್ರಾಮದ ಹೊರ ವಲಯದಲ್ಲಿರುವ ಸ್ಮಶಾನಕ್ಕೆ ಇವರು ತೆರಳಿದ್ದರು. ಮೃತರ ಅಂತ್ಯಕ್ರಿಯೆ ಮುಗಿಸಿಕೊಂಡು ಆಟೋದಲ್ಲಿ ಇವರು ವಾಪಾಸಾಗುತ್ತಿದ್ದಾಗ ಆಟೋದಿಂದ ಬಿದ್ದು ತೀವ್ರ ರಕ್ತಸ್ರಾವವಾಗಿ ಅಸುನೀಗಿದ್ದಾರೆ.

ಚಾಲಕ ವೇಗವಾಗಿ, ಚಾಲನೆ ಮಾಡಿರುವುದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದು  ಸದ್ಯ ಯಳಂದೂರು ಪೊಲೀಸರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ