ನಿವೇದಿತಾ ಗೌಡ—ಚಂದನ್ ಶೆಟ್ಟಿ ದಾಂಪತ್ಯದಲ್ಲಿ ಬಿರುಕು: ಡಿವೋರ್ಸ್ ಪಡೆದ ಜೋಡಿ! - Mahanayaka
12:03 PM Saturday 18 - October 2025

ನಿವೇದಿತಾ ಗೌಡ—ಚಂದನ್ ಶೆಟ್ಟಿ ದಾಂಪತ್ಯದಲ್ಲಿ ಬಿರುಕು: ಡಿವೋರ್ಸ್ ಪಡೆದ ಜೋಡಿ!

niveditha gowda chandan shetty
07/06/2024

ಬಿಗ್ ಬಾಸ್ ಕಾರ್ಯಕ್ರಮದ ಮೂಲಕ ಪರಿಚಿತರಾದ ನಿವೇದಿತಾ ಗೌಡ ಹಾಗೂ ಗಾಯಕ ಚಂದನ್ ಶೆಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಈ ಜೋಡಿ ಡಿವೋರ್ಸ್ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.


Provided by

ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಬ್ಬರೂ ಅನ್ಯೋನ್ಯವಾಗಿದ್ದರು. ಬಿಗ್ ಬಾಸ್ ನಲ್ಲಿ ಇಬ್ಬರು ಪರಸ್ಪರ ಭೇಟಿಯಾಗಿ ಬಳಿಕ ಮದುವೆ ಕೂಡ ಆಗಿದ್ದರು. ಇವರಿಬ್ಬರು ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುತ್ತಿದ್ದು, ಇವರ ರೀಲ್ಸ್ ಸಿಕ್ಕಾಪಟ್ಟೆ ವೈರಲ್  ಕೂಡ ಆಗುತ್ತಿತ್ತು.

ಚಂದನ್ ಶೆಟ್ಟಿ ಸಂಗೀತದ ಜೊತೆಗೆ ಸಿನಿಮಾಗಳಲ್ಲಿಯೂ ಬ್ಯುಸಿಯಾಗಿದ್ದರು. ಅತ್ತ ನಿವೇದಿತಾ ಗೌಡ ಕಾಮಿಡಿ ಶೋಗಳಲ್ಲಿ ಬ್ಯುಸಿಯಾಗಿದ್ದರು. ಈ ನಡುವೆ ಡಿವೋರ್ಸ್ ಸುದ್ದಿ ಬಂದಿದ್ದು, ಅರೆ, ಇವರು ಚೆನ್ನಾಗಿಯೇ ಇದ್ದರಲ್ವ, ಈಗ ಏನಾಯಿತು ಎಂದು ಜನ ಅಚ್ಚರಿಯಿಂದ ಪ್ರಶ್ನಿಸುವಂತಾಗಿದೆ.

ವೃತ್ತಿ ಜೀವನ ಹಿತಾಸಕ್ತಿಯಿಂದ  ಪರಸ್ಪರ ಒಪ್ಪಿಗೆಯ ಮೂಲಕ ಇಬ್ಬರೂ ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಇಂದು ಶಾಂತಿನಗರ ಕೋರ್ಟ್ ನಲ್ಲಿ ದಂಪತಿ ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಡಿವೋರ್ಸ್ ಬಗ್ಗೆ ಚಂದನ್ ಶೆಟ್ಟಿಯಾಗಲಿ, ನಿವೇದಿತಾ ಗೌಡ ಅವರಾಗಲಿ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ