ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ: ಚಂದ್ರಬಾಬು ನಾಯ್ಡು ಆರೋಪ - Mahanayaka
3:11 PM Thursday 12 - December 2024

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ: ಚಂದ್ರಬಾಬು ನಾಯ್ಡು ಆರೋಪ

19/09/2024

ಆಂಧ್ರಪ್ರದೇಶದ ಹಿಂದಿನ ವೈಎಸ್ಆರ್ ಕಾಂಗ್ರೆಸ್ (ವೈಎಸ್ಆರ್ ಪಿ) ಸರ್ಕಾರವು ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ‘ಪ್ರಸಾದ’ ವಾಗಿ ನೀಡಲಾಗುವ ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಮತ್ತು ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

ಅಮರಾವತಿಯಲ್ಲಿ ನಡೆದ ಎನ್ ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ನಾಯ್ಡು, “ತಿರುಮಲ ಲಡ್ಡುವನ್ನು ಸಹ ಕಳಪೆ ಗುಣಮಟ್ಟದ ಪದಾರ್ಥಗಳಿಂದ ತಯಾರಿಸಲಾಗಿದೆ. ಅವರು ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆರೋಪಿಸಿದ್ದಾರೆ.

ಶುದ್ಧ ತುಪ್ಪವನ್ನು ಈಗ ಬಳಸಲಾಗುತ್ತಿದೆ. ದೇವಾಲಯದಲ್ಲಿ ಎಲ್ಲವನ್ನೂ ಸ್ವಚ್ಚಗೊಳಿಸಲಾಗಿದೆ. ಇದು ಸುಧಾರಿತ ಗುಣಮಟ್ಟಕ್ಕೆ ಕಾರಣವಾಗಿದೆ ಎಂದು ನಾಯ್ಡು ಹೇಳಿದರು.
ಚಂದ್ರಬಾಬು ನಾಯ್ಡು ಅವರ ಆರೋಪಗಳ ನಂತರ ಆಂಧ್ರಪ್ರದೇಶದ ಐಟಿ ಸಚಿವ ನಾರಾ ಲೋಕೇಶ್ ಕೂಡ ಈ ವಿಷಯದ ಬಗ್ಗೆ ಜಗನ್ ಮೋಹನ್ ರೆಡ್ಡಿ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ.

“ತಿರುಮಲದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯವು ನಮ್ಮ ಅತ್ಯಂತ ಪವಿತ್ರ ದೇವಾಲಯವಾಗಿದೆ. ವೈಎಸ್ ಜಗನ್ ಮೋಹನ್ ರೆಡ್ಡಿ ಆಡಳಿತವು ತಿರುಪತಿ ಪ್ರಸಾದದಲ್ಲಿ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿದೆ ಎಂದು ತಿಳಿದು ನನಗೆ ಆಘಾತವಾಗಿದೆ” ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಆದರೆ ವೈಎಸ್ಆರ್ ಪಿಯು ನಾಯ್ಡು ಅವರ ಆರೋಪವನ್ನು ದುರುದ್ದೇಶಪೂರಿತವಾಗಿದೆ ಎಂದು ಕರೆದಿದೆ. ಅಲ್ಲದೇ ಟಿಡಿಪಿ ಮುಖ್ಯಸ್ಥರು ರಾಜಕೀಯ ಲಾಭಕ್ಕಾಗಿ ಯಾವುದೇ ಮಟ್ಟಕ್ಕೆ ಇಳಿಯುತ್ತಾರೆ ಎಂದು ಕಿಡಿಕಾರಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ