ದಲಿತ ಮಹಿಳೆಗೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಚಂದ್ರಕಾಂತ ಭಟ್ ಎಂಬಾತ ಅರೆಸ್ಟ್

ಉಡುಪಿ: ಬೀದಿ ನಾಯಿಗೆ ಊಟ ಹಾಕಿದ್ದಕ್ಕೆ ದಲಿತ ಮಹಿಳೆಯೊಬ್ಬರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಇಂದ್ರಾಳಿ ಹಯಗ್ರೀವ ನಗರದ ಚಂದ್ರಕಾಂತ ಭಟ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತನ ವಿರುದ್ಧ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕುಂಜಿಬೆಟ್ಟು ಬುದ್ನಾರ್ ನಿವಾಸಿಯಾಗಿರುವ ಬೇಬಿ(50) ಅವರು ಆರೋಪಿ ಚಂದ್ರಕಾಂತನ ಮನೆಯ ಸಮೀಪದಲ್ಲಿ ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದರು. ಈ ವೇಳೆ ಚಂದ್ರಕಾಂತ ನಾಯಿಗೆ ಊಟ ಹಾಕದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಮಹಿಳೆ ಎಂದೂ ನೋಡದೇ ಮರದ ತುಂಡಿನಿಂದ ಬೇಬಿ ಅವರ ತಲೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.
ಸದ್ಯ ಆರೋಪಿಯನ್ನು ಬಂಧಿಸಿರುವ ಮಣಿಪಾಲ ಪೊಲೀಸರು ಮಾರ್ಚ್ 21ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth