ಚಂದ್ರಶೇಖರ್ ನಿಗೂಢ ಸಾವು ಪ್ರಕರಣ: ವಿನಯ್ ಗುರೂಜಿ ಆಶ್ರಮಕ್ಕೆ ಪೊಲೀಸರ ತಂಡ! - Mahanayaka

ಚಂದ್ರಶೇಖರ್ ನಿಗೂಢ ಸಾವು ಪ್ರಕರಣ: ವಿನಯ್ ಗುರೂಜಿ ಆಶ್ರಮಕ್ಕೆ ಪೊಲೀಸರ ತಂಡ!

chandrashekhar vinay guruji
07/11/2022

ಚಿಕ್ಕಮಗಳೂರು: ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ನಿಗೂಢ ಸಾವಿನ ಕುರಿತು ತನಿಖೆ ಚುರುಕುಗೊಂಡಿದ್ದು,  ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ವಿನಯ್ ಗುರೂಜಿ ಆಶ್ರಮಕ್ಕೆ ಪೊಲೀಸರ ತಂಡ ಭೇಟಿ ನೀಡಿ ವಿಚಾರಣೆ ನಡೆಸಿದೆ ಎಂದು ತಿಳಿದು ಬಂದಿದೆ.

ಚನ್ನಗಿರಿ ಪಿಎಸ್ ಐ ನೇತೃತ್ವದ ನಾಲ್ವರ ತಂಡ ಆಶ್ರಮಕ್ಕೆ ಭೇಟಿ ನೀಡಿದ್ದು, ಆಶ್ರಮದ ಸಿಬ್ಬಂದಿ, ಉಸ್ತುವಾರಿ ವಹಿಸಿರುವ ಭಕ್ತರನ್ನು ವಿಚಾರಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಈವರೆಗೆ ಈ ಪ್ರಕರಣ ಸಂಬಂಧ ಪೊಲೀಸರು ಆಶ್ರಮಕ್ಕೆ 4 ಬಾರಿ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

ಚಂದ್ರು ಸಾವಿಗೆ ಕಾರಣ ಅಪಘಾತ ಅಂತ ಹೇಳಲಾಗುತ್ತಿದೆ. ಓವರ್ ಸ್ಪೀಡ್ ನಿಂದ ಬಂದ ಕಾರಣ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಆದರೆ, ರೇಣುಕಾಚಾರ್ಯ ಕುಟುಂಬಸ್ಥರು ಇದೊಂದು ವ್ಯವಸ್ಥಿತವಾದ ಕೊಲೆ ಎಂದು ಆರೋಪಿಸಿದ್ದಾರೆ.

ಇಂದು ಚಂದ್ರು ಪೋಸ್ಟ್ ಮಾರ್ಟಂ ರಿಪೋರ್ಟ್ ಹಾಗೂ ಎಫ್ ಎಸ್ ಎಲ್ ರಿಪೋರ್ಟ್ ಪೊಲೀಸರ ಕೈಗೆ ದೊರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪೋಸ್ಟ್ ಮಾರ್ಟಂ ವರದಿಯಿಂದ ಘಟನೆಯ ಸತ್ಯಾಸತ್ಯತೆ ಹೊರಬೀಳಬೇಕಿದೆ.

ಈಗಾಗಲೇ ಚಂದ್ರು ಸಾವಿನ ಬಗ್ಗೆ ನಾನಾ ಕಥೆಗಳು ಸೃಷ್ಟಿಯಾಗಿದ್ದು, ಎಂ.ಪಿ.ರೇಣುಕಾಚಾರ್ಯ ಅವರು ಹಲವಾರು ಅನುಮಾನಗಳನ್ನು ವ್ಯಕ್ತಪಡಿಸಿ ಹೇಳಿಕೆಗಳನ್ನು ನೀಡಿದ್ದಾರೆ. ಬೆದರಿಕೆ ಕರೆಗಳು ಬಂದಿರುವುದಾಗಿ ಹೇಳುತ್ತಿದ್ದಾರೆ. ಇನ್ನೊಂದೆಡೆಯಲ್ಲಿ ಚಂದ್ರು ಅವರ ತಂದೆ ಕೂಡ ತಮ್ಮ ಮಗನ ಸಾವಿನ ಬಗ್ಗೆ ಹಲವಾರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಆದರೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇದೊಂದು  ಓವರ್ ಸ್ಪೀಡ್ ಅಪಘಾತ ಎಂದು ತಿಳಿದು ಬಂದಿದೆ ಎನ್ನಲಾಗ್ತಿದೆ. ಪೋಸ್ಟ್ ಮಾರ್ಟಂ ವರದಿ ಪೊಲೀಸರ ಕೈ ಸೇರಿದರೆ, ಪೊಲೀಸರ ಮುಂದಿನ ತನಿಖೆಗೆ ಸಹಕಾರಿಯಾಗಲಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ