4:52 AM Wednesday 22 - October 2025

ಮತ್ತೊಂದು ಸಕ್ಸಸ್ ಹೆಜ್ಜೆ ಇಟ್ಟ ಇಸ್ರೋ: ಚಂದ್ರನ ಕಕ್ಷೆಯೊಳಗೆ ಪ್ರವೇಶಿಸಿದ ಚಂದ್ರಯಾನ 3

05/08/2023

ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಮತ್ತೊಂದು ಯಶಸ್ವಿ ಹೆಜ್ಜೆಯನ್ನು ಇಟ್ಟಿದೆ. ಚಂದ್ರಯಾನ-3 ನೌಕೆಯು ಇಂದು ಯಶಸ್ವಿಯಾಗಿ ಚಂದ್ರನ ಕಕ್ಷೆಯೊಳಗೆ ಪ್ರವೇಶ ಮಾಡಿದೆ.
ಚಂದ್ರಯಾನ- 3 ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದೆ ಎಂಬ ಮಾಹಿತಿಯನ್ನು ಸ್ವತಃ ಇಸ್ರೋ ಮಾಹಿತಿ ನೀಡಿದೆ. ಟ್ವೀಟ್ ಮೂಲಕ ಮಾಹಿತಿ ನೀಡಿರುವ ಇಸ್ರೋ, ‘ಭೂಮಿಯಿಂದ ಉಡಾವಣೆಯಾದ ಚಂದ್ರಯಾನ ನೌಕೆಯು, ಈಗ ತನ್ನ ಉದ್ದೇಶಿದ ಗುರಿಯಾದ ಚಂದ್ರನ ಕಕ್ಷೆಯನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ ಪ್ರವೇಶಿಸುವ ಮೂಲಕ ಮತ್ತೊಂದು ಹಂತವನ್ನು ಸಫಲವಾಗಿ ಪೂರ್ಣಗೊಳಿಸಿದಂತಾಗಿದೆ. ಇದು ಇಸ್ರೋದ ಯೋಜನೆಯ ಮತ್ತೊಂದು ಯಶಸ್ಸಾಗಿದೆ ಎಂದು ಹೇಳಿದೆ.
ಲೂನಾರ್ ಆರ್ಬಿಟ್ ಇನ್ಸರ್ಷನ್ (ಎಲ್‌ಒಐ) ಅಥವಾ ಚಂದ್ರನ ಕಕ್ಷೆ ಸೇರ್ಪಡೆ ಯೋಜನೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ. ಚಂದ್ರಯಾನದ ಎಲ್ಲಾ ವ್ಯವಸ್ಥೆಗಳೂ ಆರೋಗ್ಯಪೂರ್ಣವಾಗಿವೆ. ಬೆಂಗಳೂರಿನ ಐಎಸ್‌ಟಿಆರ್‌ಎಸಿಯ ಮಿಷನ್ ಆಪರೇಷನ್ ಕಾಂಪ್ಲೆಕ್ಸ್‌ನಿಂದ (ಎಂಓಎಕ್ಸ್) ಚಂದ್ರನಿಗೆ ಅತಿ ಸಮೀಪದ ಕಕ್ಷೆಯ ಭಾಗವಾದ ಪೆರಿಲೂನ್‌ನಿಂದ ರೆಟ್ರೋ ಬರ್ನಿಂಗ್ (ರಾಕೆಟ್‌ಗಳನ್ನು ಉಡಾವಣೆ ಮಾಡಿದ ದಿಕ್ಕಿನ ವಿರುದ್ಧ ಭಾಗದಿಂದ ರಾಕೆಟ್‌ ಉರಿಸುವುದು) ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಇಸ್ರೋ ಹೇಳಿದೆ.
ಇದೇ ವೇಳೆ ಮುಂದಿನ ಕಾರ್ಯಾಚರಣೆಯಾದ ಕಕ್ಷೆಯ ಸಂಕೋಚನ ಪ್ರಕ್ರಿಯೆಯನ್ನು ಆಗಸ್ಟ್ 6ರ ಭಾನುವಾರ ರಾತ್ರಿ 11 ಗಂಟೆಗೆ ನಿಗದಿಪಡಿಸಲಾಗಿದೆ. ಆಗಸ್ಟ್ ಮೊದಲ ವಾರದಲ್ಲಿ ನೌಕೆಯು ಚಂದ್ರನ ಸುತ್ತ 5- 6 ಕಕ್ಷೆಯ ಪಥವನ್ನು ಪೂರ್ಣಗೊಳಿಸಲು ತಯಾರಿ ನಡೆಸಿದೆ. ಕ್ರಮೇಣ ಅದು 100 ಕಿಮೀ ಆರ್ಬಿಟ್‌ನ ವರ್ತುಲಕ್ಕೆ ಪರಿವರ್ತನೆಯಾಗಲಿದೆ. ಮುಂದಿನ ಹತ್ತು ದಿನಗಳಲ್ಲಿ ಚಂದ್ರನ ದಕ್ಷಿಣ ಧ್ರುವದ ಪ್ರದೇಶದ ಒಳಗೆ ಇಳಿಯಲು ಸೂಕ್ತವಾದ ಜಾಗವನ್ನು ನಿರ್ಧರಿಸಲಾಗುತ್ತದೆ. ಆಗಸ್ಟ್ 23ರ ಸಂಜೆ 5.47ರ ಸುಮಾರಿಗೆ ಚಂದ್ರಯಾನ ನೌಕೆಯ ಲ್ಯಾಂಡರ್ ಕಕ್ಷೆಯಿಂದ ಹೊರಬರುತ್ತದೆ ಮತ್ತು ಸುಗಮ ಲ್ಯಾಂಡಿಂಗ್‌ಗೆ ಪ್ರಯತ್ನ ಆರಂಭಿಸುತ್ತದೆ ಎಂದು ಇಸ್ರೋ ಮೂಲಗಳು ತಿಳಿಸಿವೆ.

 

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version