ಸಂವಿಧಾನ ಬದಲಾವಣೆ ಮಾಡ್ತೀನಿ ಅಂದ್ರೆ ಜನರೇ ಡಿಕೆಶಿ ನಟ್ಟು ಬೋಲ್ಟ್ ಟೈಟ್ ಮಾಡ್ತಾರೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಮಾಡ್ತೀವಿ ಅಂತಿದ್ದಾರೆ, ಹೀಗೆ ಮಾತನಾಡಿದರೆ ಜನರೇ ಅವರ ನಟ್ಟು ಬೋಲ್ಟ್ ಟೈಟ್ ಮಾಡುತ್ತಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಂಧಿ ಕುಟುಂಬದ ಕುಡಿ ರಾಹುಲ್ ಗಾಂಧಿ ಸಂವಿಧಾನ ರಕ್ಷಕರು ಎಂದು ಕಾಂಗ್ರೆಸ್ ನವರು ಹೇಳುತ್ತಾರೆ. ರಾಹುಲ್ ಗಾಂಧಿ ಸಂವಿಧಾನ ಪುಸ್ತಕ ಹಿಡಿದು ಗಂಟೆ ಅಲ್ಲಾಡಿಸಿದರೆ ಆಗಲ್ಲ, ಮೋದಿ ಸಂವಿಧಾನ ಬದಲಾವಣೆ ಮಾಡ್ತಾರೆ ಅಂತ ಕಾಂಗ್ರೆಸಿಗರು ಅಪಪ್ರಚಾರ ಮಾಡಿದ್ರು, ಈಗ ಡಿಕೆಶಿ ಸಂವಿಧಾನ ಬದಲಾವಣೆ ಮಾಡ್ತೇವೆ ಅಂತಿದ್ದಾರೆ ಎಂದು ಹೇಳಿದರು.
ಡಿಕೆಶಿ ತಲೆಗೆ ನಟ್ಟು ಬೋಲ್ಟ್ ಇಲ್ಲದ ಕಾರಣ ಅಲ್ಲಾಡುತ್ತಿದೆ ಅನ್ನಿಸುತ್ತಿದೆ. ಹೀಗೆ ಮಾತನಾಡಿದ್ರೆ, ರಾಜ್ಯದ ಜನರೇ ಇವರ ನಟ್ಟು ಬೋಲ್ಟ್ ಟೈಟ್ ಮಾಡಲು ಸ್ಪಾನರ್ ಎತ್ತಿಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದ್ರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: