ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಣ: ಚಕ್ರವರ್ತಿ ಸೂಲಿಬೆಲೆ
ಬೆಂಗಳೂರು: ಕಾಂಗ್ರೆಸ್ ಬಜರಂಗದಳದಂತಹ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಪ್ರಣಾಳಿಕೆಯಲ್ಲಿ ಘೋಷಿಸಿರುವುದಕ್ಕೆ ಬಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳು ಕಾಂಗ್ರೆಸ್‌ಗೆ ಠಕ್ಕರ್ ಕೊಡಲು ಮುಂದಾಗಿದೆ.
ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಿಸಲು ಬಜರಂಗದಳ ನಿರ್ಧರಿಸಿವೆ. ಸಂಜೆ 7 ಗಂಟೆಗೆ ಹನುಮಾನ್ ಚಾಲೀಸಾ ಪಠಣ ಆಯೋಜನೆಗೆ ಸಿದ್ಧತೆ ನಡೆಸಿವೆ.ಈ ಕುರಿತು ಸಾಮಾಜಿಕ ಜಾಲತಾಣ ಮೂಲಕ ಹಿಂದೂಪರ ಸಂಘಟಕ ಚಿಂತಕ ಚಕ್ರವರ್ತಿ ಸೂಲಿಬೆಲೆ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.
ಸೂಲಿಬೆಲೆ ತಮ್ಮ ಫೇಸ್‌ಬುಕ್‌ನಲ್ಲಿ ಬಜರಂಗ ದಳ ನಾಳೆ ಸಂಜೆ 7 ಗಂಟೆಗೆ ರಾಜ್ಯದಾದ್ಯಂತ ಸಾಮೂಹಿಕ ಹನುಮಾನ್ ಚಾಲಿಸಾ ಪಠಣವನ್ನು ಆಯೋಜಿಸಿದೆ. ಇದು ಧರ್ಮಕ್ಕೆ ಸಂಕಟವೆರಗಿರುವ ಸಮಯ. ಒಟ್ಟಾಗಿ ನಿಲ್ಲುವುದೊಂದೇ ಪರಿಹಾರ. ನಮ್ಮೆಲ್ಲ ಭೇದಗಳನ್ನು ಒತ್ತಟ್ಟಿಗಿಟ್ಟು ಧರ್ಮರಕ್ಷಣೆಗೆ ಜೊತೆಯಾಗೋಣ, ಕೈ ಜೋಡಿಸೋಣ ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























