ಹಲ್ಲೆ ಆರೋಪ: ಬಿಜೆಪಿ, ಕಾಂಗ್ರೆಸ್ ನಿಂದ ದೂರು ಹಿನ್ನೆಲೆ; ಎರಡು ಕೇಸ್ ಅಪರಾಧ ವಿಭಾಗಕ್ಕೆ ವರ್ಗಾವಣೆ
ಸಂಸತ್ತಿನ ಹೊರಗೆ ಗುರುವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಎರಡೂ ಪ್ರತಿ ದೂರುಗಳನ್ನು ದಾಖಲಿಸಿದ ಒಂದು ದಿನದ ನಂತರ, ದೆಹಲಿ ಪೊಲೀಸರು ಶುಕ್ರವಾರ ಎರಡೂ ಪ್ರಕರಣಗಳನ್ನು ಅಪರಾಧ ವಿಭಾಗಕ್ಕೆ ವರ್ಗಾಯಿಸಿದ್ದಾರೆ.
ಬಿಜೆಪಿ ಸಲ್ಲಿಸಿದ ದೂರಿನ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಮತ್ತು ಲೋಕಸಭಾ ಸಂಸದ ರಾಹುಲ್ ಗಾಂಧಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಆದರೆ ಕಾಂಗ್ರೆಸ್ ನ ಮಹಿಳಾ ಸಂಸದರ ದೂರಿನ ಆಧಾರದ ಮೇಲೆ ಇನ್ನೂ ಎಫ್ಐಆರ್ ದಾಖಲಿಸಿಲ್ಲ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಈ ಮಧ್ಯೆ ಸಂಸತ್ತಿನ ಹೊರಗೆ ಉಂಟಾದ ಗೊಂದಲದ ಬಗ್ಗೆ ಕೋಲಾಹಲದ ಮಧ್ಯೆ, ರಾಹುಲ್ ಗಾಂಧಿ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. “ಸಂವಿಧಾನ್ ಮೇಲೆ ಅಕ್ರಮ್” (ಸಂವಿಧಾನದ ಮೇಲೆ ಪೂರ್ಣ ದಾಳಿ) ನಡೆದಿದೆ ಎಂದು ಹೇಳಿದ್ದಾರೆ.
ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸುವ ಗಂಭೀರ ತಪ್ಪು ಮಾಡಿದ್ದಾರೆ ಎಂದು ರಾಹುಲ್ ಗಾಂಧಿಯವರು ಕಿಡಿಕಾರಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj




























