ರಸ್ತೆಯಲ್ಲಿ ಚಾಪೆ ಹಾಸಿ ಉರುಳಾಡಿದ ವಾಟಾಳ್ ನಾಗರಾಜ್! - Mahanayaka
12:17 PM Thursday 16 - October 2025

ರಸ್ತೆಯಲ್ಲಿ ಚಾಪೆ ಹಾಸಿ ಉರುಳಾಡಿದ ವಾಟಾಳ್ ನಾಗರಾಜ್!

vatal nagaraj
01/05/2021

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಕನ್ನಡ ಪರ ಹೋರಾಟಗಾರ, ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ರಸ್ತೆಯಲ್ಲಿಯೇ ಚಾಪೆ ಹಾಕಿ ಮಲಗಿ ಪ್ರತಿಭಟಿಸಿರುವ ಘಟನೆ ನಡೆದಿದೆ.


Provided by

ಇಲ್ಲಿನ ಮೈಸೂರು ಬ್ಯಾಂಕ್ ವೃತ್ತ ರಸ್ತೆಯ ಮೇಲೆ ಚಾಪೆ ಹಾಕಿ ಉರುಳು ಸೇವೆ ಮಾಡಿದ ಅವರು, ಖಾಸಗಿ ಆಸ್ಪತ್ರೆಗಳು ಹಗಲು ದರೋಡೆ ನಿಲ್ಲಿಸಬೇಕು, ಸರ್ಕಾರಿ ಆಸ್ಪತ್ರೆಗಳ ನರಕ ತಪ್ಪಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ಸಾವಿನ ಮನೆಯಾಗುತ್ತಿದೆ. ಬೀದಿ ಬದಿ ವ್ಯಾಪಾರಿಗಳು, ಬಡವರು, ಆಟೋ ಚಾಲಕರು ಸೇರಿದಂತೆ ಪ್ರತಿಯೊಬ್ಬರಿಗೂ ಕನಿಷ್ಠ ತಿಂಗಳಿಗೆ 10 ಸಾವಿರ ರೂಪಾಯಿಗಳನ್ನು ಸರ್ಕಾರ ಪರಿಹಾರವಾಗಿ ನೀಡಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

ಕೊರೊನಾ ಸೋಂಕಿತರು ಸಾವನ್ನಪ್ಪಿದರೆ, ಅವರ ಕುಟುಂಬಸ್ಥರಿಗೆ ಸರ್ಕಾರ ಕನಿಷ್ಠ 5 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಬೇಕು ಇದು ಸಾಧ್ಯವಾಗದೇ ಇದ್ದರೆ, ಕೇಂದ್ರದ ಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ನಾಗರಾಜ್ ಒತ್ತಾಯಿಸಿದರು.

ಇತ್ತೀಚಿನ ಸುದ್ದಿ