2022ರ ಭೂಪತಿನಗರ ಸ್ಫೋಟ ಪ್ರಕರಣ: 6 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ - Mahanayaka

2022ರ ಭೂಪತಿನಗರ ಸ್ಫೋಟ ಪ್ರಕರಣ: 6 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್

05/07/2024

ಪಶ್ಚಿಮ ಬಂಗಾಳದ 2022 ರ ಭೂಪತಿನಗರ ಸ್ಫೋಟ ಪ್ರಕರಣದಲ್ಲಿ ಆರು ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮೊದಲ ಚಾರ್ಜ್ ಶೀಟ್ ಸಲ್ಲಿಸಿದೆ.

ಈ ಸ್ಫೋಟದಲ್ಲಿ ಸಾವನ್ನಪ್ಪಿದ ಮೂವರ ವಿರುದ್ಧದ ಆರೋಪಗಳನ್ನು ಕೈಬಿಡಲಾಗಿದೆ.

ಕೊಲ್ಕತ್ತಾದ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾದ ಚಾರ್ಜ್ ಶೀಟ್ ನಲ್ಲಿ ಮೃತರನ್ನು ರಾಜ್ ಕುಮಾರ್ ಮನ್ನಾ, ಬಿಸ್ವಜಿತ್ ಗಯೆನ್ ಮತ್ತು ಬುದ್ಧದೇಬ್ ಮನ್ನಾ ಎಂದು ಗುರುತಿಸಲಾಗಿದೆ. ಉಳಿದ ಮೂವರನ್ನು ಪಂಚನನ್ ಘೋರೈ, ಮನೋಬ್ರತಾ ಜನಾ ಮತ್ತು ಬಲೈ ಚರಣ್ ಮೈಟಿ ಎಂದು ಹೆಸರಿಸಲಾಗಿದೆ. ಘೋರೈ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ರೆ ಜನಾ ಮತ್ತು ಮೈಟಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಡಿಸೆಂಬರ್ 2, 2022 ರಂದು ನರುಬಿಲಾ ಗ್ರಾಮದಲ್ಲಿರುವ ತೃಣಮೂಲ ಕಾಂಗ್ರೆಸ್ ಬೂತ್ ಅಧ್ಯಕ್ಷರ ನಿವಾಸದಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದ ಕ್ರಿಮಿನಲ್ ಪಿತೂರಿಯಲ್ಲಿ ಎಲ್ಲಾ ಆರು ವ್ಯಕ್ತಿಗಳು ಸಕ್ರಿಯವಾಗಿ ಭಾಗಿಯಾಗಿರುವುದು ಕಂಡುಬಂದಿದೆ.

ಎನ್ಐಎ ಜೂನ್ 4, 2023 ರಂದು ಪಶ್ಚಿಮ ಬಂಗಾಳ ಪೊಲೀಸರಿಂದ ತನಿಖೆಯನ್ನು ವಹಿಸಿಕೊಂಡಿದೆ ಮತ್ತು ಐಪಿಸಿ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಆರೋಪ ಹೊರಿಸಿದೆ.


Provided by
Provided by

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ