ದೆಹಲಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 7 ನವಜಾತ ಶಿಶುಗಳ ಸಾವಿಗೆ ಆಸ್ಪತ್ರೆಯ ನಿರ್ಲಕ್ಷ್ಯ ಕಾರಣ ಎಂದ ಚಾರ್ಜ್ ಶೀಟ್
ಪೂರ್ವ ದೆಹಲಿಯ ನವಜಾತ ಶಿಶುವಿನ ಆಸ್ಪತ್ರೆಯಲ್ಲಿ ತೀವ್ರ ನಿರ್ಲಕ್ಷ್ಯ ಮತ್ತು ನಿಯಮ ಉಲ್ಲಂಘನೆಯಿಂದ ಏಳು ಶಿಶುಗಳ ಸಾವಿಗೆ ಕಾರಣವಾಗಿದೆ ಎಂದು ದೆಹಲಿ ಪೊಲೀಸರ ಚಾರ್ಜ್ ಶೀಟ್ ನಲ್ಲಿ ತಿಳಿಸಲಾಗಿದೆ.
ಪೂರ್ವ ದೆಹಲಿಯ ಖಾಸಗಿ ನವಜಾತ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡ ಎರಡು ತಿಂಗಳ ನಂತರ, ದೆಹಲಿ ಪೊಲೀಸರು ಜುಲೈ 22 ರಂದು ಈ ಪ್ರಕರಣದಲ್ಲಿ 796 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಆಸ್ಪತ್ರೆಯು ಅಗ್ನಿಶಾಮಕ ಸುರಕ್ಷತಾ ಸಾಧನಗಳಿಲ್ಲದೆ ಕಾರ್ಯನಿರ್ವಹಿಸುತ್ತಿದೆ. ಬೆಂಕಿ ಅವಘಡ ಆದಾಗ ಸಿಬ್ಬಂದಿ ತ್ವರಿತವಾಗಿ ಕಾರ್ಯನಿರ್ವಹಿಸಲಿಲ್ಲ ಎಂದು ಹೇಳಲಾಗಿದೆ.
ನಗರದ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದ್ದು, ಫೋರೆನ್ಸಿಕ್ ವರದಿಗಳೊಂದಿಗೆ 81 ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ.
“ತನಿಖೆಯ ಸಮಯದಲ್ಲಿ, ಎನ್ಐಸಿಯು ನಡೆಸುವ ಶಾಸನಬದ್ಧ ಅವಶ್ಯಕತೆ ಮತ್ತು ಆಸ್ಪತ್ರೆಯಿಂದ ಉಲ್ಲಂಘಿಸಲ್ಪಟ್ಟ ಮಾನದಂಡಗಳ ಬಗ್ಗೆ ನಾವು ಒಟ್ಟು ಎಂಟು ಅಂಶಗಳನ್ನು ಪರಿಶೀಲಿಸಿದ್ದೇವೆ. ಅಗ್ನಿ ಸುರಕ್ಷತೆಗೆ ಸಂಬಂಧಿಸಿದಂತೆ, ಆಸ್ಪತ್ರೆಯು ಜಾರಿಗೆ ತಂದಿರುವ ಸುರಕ್ಷತಾ ಕ್ರಮಗಳನ್ನು ತೋರಿಸಲು ಯಾವುದೇ ದಾಖಲೆಗಳು ಲಭ್ಯವಿಲ್ಲ. ಆಸ್ಪತ್ರೆಯು ಐದು ಹಾಸಿಗೆಗಳೊಂದಿಗೆ ಕಾರ್ಯನಿರ್ವಹಿಸಲು ಅನುಮತಿಯನ್ನು ಹೊಂದಿತ್ತು ಆದರೆ 12 ಹಾಸಿಗೆಗಳೊಂದಿಗೆ ಕಾರ್ಯನಿರ್ವಹಿಸುತ್ತಿತ್ತು “ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಚಾರ್ಜ್ ಶೀಟನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth