ಡೊನಾಲ್ಡ್ ಟ್ರಂಪ್ ಆಪ್ತ ಸ್ನೇಹಿತನನ್ನು ಗುಂಡುಕ್ಕಿ ಹತ್ಯೆ!

ಕಳೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಯುವ ರಿಪಬ್ಲಿಕನ್ ಮತದಾರರನ್ನು ಒಟ್ಟುಗೂಡಿಸುವಲ್ಲಿ ಪ್ರಭಾವಶಾಲಿ ಪಾತ್ರ ವಹಿಸಿದ್ದ ಕಾರ್ಯಕರ್ತ ಮತ್ತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸ್ನೇಹಿತ ಚಾರ್ಲಿ ಕಿರ್ಕ್(31 ವರ್ಷ) ಅವರನ್ನು ಭಾರತೀಯ ಕಾಲಮಾನ ಪ್ರಕಾರ ಕಳೆದ ರಾತ್ರಿ ಉತಾಹ್ ಕಾಲೇಜಿನ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಹತ್ಯೆ ಘಟನೆಗೆ ಸಂಬಂಧಿಸಿ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ. FBI ನಿರ್ದೇಶಕ ಕಾಶ್ ಪಟೇಲ್ ಆರಂಭದಲ್ಲಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದರು, ಆದರೆ ನಂತರ ಆ ವ್ಯಕ್ತಿಯನ್ನು ವಿಚಾರಣೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಕಿರ್ಕ್ ತನ್ನ ಲಾಭರಹಿತ ರಾಜಕೀಯ ಸಂಸ್ಥೆ ಆಯೋಜಿಸಿದ್ದ ಚರ್ಚೆಯಲ್ಲಿ ಮಾತನಾಡುತ್ತಿದ್ದರು. ಗುಂಡಿನ ದಾಳಿಗೆ ಸ್ವಲ್ಪ ಮೊದಲು, ಕಿರ್ಕ್ ಸಾಮೂಹಿಕ ಗುಂಡಿನ ದಾಳಿ ಮತ್ತು ಬಂದೂಕು ಹಿಂಸಾಚಾರದ ಬಗ್ಗೆ ಪ್ರೇಕ್ಷಕರಿಂದ ಪ್ರಶ್ನೆಗಳನ್ನು ಕೇಳುತ್ತಿದ್ದರು.
ಕಳೆದ 10 ವರ್ಷಗಳಲ್ಲಿ ಎಷ್ಟು ಟ್ರಾನ್ಸ್‌ಜೆಂಡರ್ ಅಮೆರಿಕನ್ನರು ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದಾರೆಂದು ನಿಮಗೆ ತಿಳಿದಿದೆಯೇ ಎಂದು ವ್ಯಕ್ತಿಯೊಬ್ಬರು ಕೇಳಿದ್ದಾಗ, ಕಿರ್ಕ್ “ತುಂಬಾ ಹೆಚ್ಚು” ಎಂದು ಉತ್ತರಿಸಿದ್ದರು.
ಚಾರ್ಲಿ ಕಿರ್ಕ್ ಹತ್ಯೆ ಗೌರವಾರ್ಥವಾಗಿ, ಅಮೆರಿಕದ ಧ್ವಜಗಳನ್ನು ಅರ್ಧಕ್ಕೆ ಇಳಿಸುವಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD