ಚಾರ್ಮಾಡಿ ಘಾಟಿಯಲ್ಲಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ - Mahanayaka

ಚಾರ್ಮಾಡಿ ಘಾಟಿಯಲ್ಲಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ

charmadi
15/09/2022


Provided by

ಬೆಳ್ತಂಗಡಿ; ಚಾರ್ಮಾಡಿ ಘಾಟಿಯಲ್ಲಿ ಬಸ್ ಮತ್ತು ಕಾರಿನ ನಡುವೆ ಬುಧವಾರ ರಾತ್ರಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅಪಘಾತ ನಡೆದ ಬಳಿಕ ಒಂದು ಕಿ.ಮೀಗೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಚಾರ್ಮಾಡಿ ಘಾಟ್ ನ ಬಿದರುತಳ ಸಮೀಪ ಈ ಅಪಘಾತ ನಡೆದಿದ್ದು, ಕಾರು ಅರಸೀಕೆರೆಯಿಂದ ಉಜಿರೆ ಕಡೆಗೆ ಬರುತ್ತಿತ್ತು. ಬಸ್  ಉಜಿರೆಯಿಂದ ಕಡೂರಿಗೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ.

ಗಾಯಾಳುಗಳಿಗೆ ಬಣಕಲ್ ನಲ್ಲಿ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಮೂಡಿಗೆರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಬಣಕಲ್ ಠಾಣಾಧಿಕಾರಿ ಗಾಯಿತ್ರಿ ಮತ್ತು ಸಿಬಂದಿಗಳು ಭೇಟಿ ನೀಡಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ