ಚಾರ್ಮಾಡಿ ಘಾಟ್; ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ಕಾಡ್ಗಿಚ್ಚು

ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯಕ್ಕೆ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರು. ರಸ್ತೆ ಬದಿ ಇದ್ದ ಬೆಂಕಿಯನ್ನಷ್ಟೇ ನಂದಿಸಲಾಗಿದ್ದು, ಗುಡ್ಡಕ್ಕೆ ಏರಿರುವ ಬೆಂಕಿ ನಂದಿಸಲು ಸಾಧ್ಯವಾಗದೆ ಪರದಾಡಿದರು. ಮಲ್ಲೇಶ್, ರಂಜಿತ್, ಮುತ್ತಪ್ಪ, ಅಶೋಕ್, ಮೋಹನ್‌ರಾಜ್(ಚಾಲಕ) ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.
ಬೆಂಕಿಯ ಕೆನ್ನಾಲಿಗೆ 10 ಕಿ.ಲೋ ಮೀಟರ್ ದೂರಕ್ಕೂ ಕಾಣಿಸುತ್ತಿದೆ. ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಬೆಂಕಿ ಹೊತ್ತಿಕೊಂಡು ಎರಡು ಗಂಟೆ ಕಳೆದರೂ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದಿಲ್ಲ ಎಂದು ಸ್ಥಳೀಯರು ಆರೋಪಿಸಿದರು. ಈ ಭಾಗದಲ್ಲಿ ವನ್ಯಜೀವಿ ಮತ್ತು ಸಸ್ಯ ಸಂಪತ್ತು ಅಪಾರ ಪ್ರಮಾಣದಲ್ಲಿದೆ. ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಪರದಾಡಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: