ಚಾರ್ಮಾಡಿ ಘಾಟಿ: ರಸ್ತೆ ಬದಿಯ ಬಂಡೆಗೆ ಡಿಕ್ಕಿ ಹೊಡೆದ ಕಾರು: ನಾಲ್ವರಿಗೆ ಗಾಯ, ಮಹಿಳೆಯ ಸ್ಥಿತಿ ಗಂಭೀರ - Mahanayaka

ಚಾರ್ಮಾಡಿ ಘಾಟಿ: ರಸ್ತೆ ಬದಿಯ ಬಂಡೆಗೆ ಡಿಕ್ಕಿ ಹೊಡೆದ ಕಾರು: ನಾಲ್ವರಿಗೆ ಗಾಯ, ಮಹಿಳೆಯ ಸ್ಥಿತಿ ಗಂಭೀರ

charmadi ghat
04/11/2024

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಗೆ ಡಿಕ್ಕಿ  ಹೊಡೆದ ಘಟನೆ ನಡೆದಿದೆ.

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಈ ಘಟನೆ ನಡೆದಿದೆ. ಉಜಿರೆಯಿಂದ ಮೂಡಿಗೆರೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಬೃಹತ್ ಗಾತ್ರದ ಬಂಡೆಗೆ ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಟ್ಟು ನಾಲ್ವರು ಪ್ರಯಾಣಿಕರ ಪೈಕಿ, ಮಹಿಳೆಗೆ ಗಂಭಿರವಾಗಿ ಗಾಯಗಳಾಗಿವೆ. ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ  ಬಣಕಲ್ ಠಾಣಾ ಪೊಲೀಸರು ಭೇಟಿ ನೀಡಿದ್ದು, ಬಣಕಲ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Provided by
Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ