ನಕಲಿ ಪಾಸ್‌ ಪೋರ್ಟ್ ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ವಂಚನೆ: ಆರೋಪಿಗಳಿಗೆ ಶಿಕ್ಷೆ ಪ್ರಕಟ - Mahanayaka
12:03 AM Saturday 14 - December 2024

ನಕಲಿ ಪಾಸ್‌ ಪೋರ್ಟ್ ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ವಂಚನೆ: ಆರೋಪಿಗಳಿಗೆ ಶಿಕ್ಷೆ ಪ್ರಕಟ

jail
07/12/2022

ಉಡುಪಿ: ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಪಾಸ್‌ ಪೋರ್ಟ್ ಗಳನ್ನು ಹೊಂದಿ ಸರ್ಕಾರಕ್ಕೆ ವಂಚಿಸಿದ ಆರೋಪಿಗಳಿಗೆ ನಗರದ ಪ್ರಧಾನ ಸಿ.ಜೆ ಮತ್ತುಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡವಿಧಿಸಿದೆ.

ಪಲಿಮಾರು ಗ್ರಾಮದರಾಖಿ ವಿನ್‌ ಸೆಂಟ್ ಡಿ ಸೋಜಾ ಎಂಬಾತನು ತನ್ನ ಅಣ್ಣನಾದ ಪಿಯೂಶ್ ಆಗಸ್ಟಿನ್ ಡಿ’ಸೋಜರವರ ಹೆಸರನ್ನು ದುರ್ಬಳಕೆ ಮಾಡಿ, ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ತನ್ನದೇ ಭಾವಚಿತ್ರ ಹಾಗೂ ಬೇರೆ ಬೇರೆ ಹೆಸರು ಮತ್ತು ವಿಳಾಸದ ಪಾಸ್‌ ಪೋರ್ಟ್ ಗಳನ್ನು ಹೊಂದಿದ್ದು, ಸದ್ರಿ ಪಾಸ್‌ ಪೋರ್ಟ್ ಗಳನ್ನು ಹೊಂದಲು ಪಾವುಲ್‌ ಡಿಸೋಜಾ ಎಂಬಾತನು ನಕಲಿ ಪಾಸ್‌ ಪೋರ್ಟ್ ಗಳನ್ನು ಸೃಷ್ಟಿಸಲು ಬೇಕಾಗುವ ಎಲ್ಲಾ ದಾಖಲೆಗಳನ್ನು ನೀಡಿರುತ್ತಾನೆ.

ವಿಜಯ್‌ರಾವ್ ಮತ್ತುಮಹೇಂದ್ರ ಬಾಬುರವರು ತಮ್ಮಏಜನ್ಸಿಯ ಮೂಲಕ ರಾಖಿ ವಿನ್‌ಸೆಂಟ್ ಡಿ ಸೋಜಾಗೆ ಬೇರೆ ಬೇರೆ ಕೇಂದ್ರಗಳಿಂದ ಪಾಸ್‌ಪೋರ್ಟ್ ಗಳನ್ನು ಪಡೆದುಕೊಳ್ಳಲು ಸಹಕರಿಸಿ ಸುಳ್ಳು ಸ್ಪಷ್ಟನೆಯ ಪಾಸ್‌ ಪೋರ್ಟ್ ಗಳನ್ನು ನೈಜವೆಂದು ನಂಬಿಸಿ ಸರಕಾರಕ್ಕೆ ವಂಚಿಸಿ ಇಸ್ರೇಲ್‌ ದೇಶದಲ್ಲಿಉದ್ಯೋಗ ಪಡೆದುಕೊಂಡು ಉದ್ಯೋಗ ಮಾಡುತ್ತಿರುವ ಬಗ್ಗೆ ಮತ್ತು ರಜೆಯಲ್ಲಿ ದೇಶಕ್ಕೆ ವಾಪಾಸು ಬಂದ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇಲೆ ಕರಾವಳಿ ಕಾವಲು ಪಡೆಯ ಪೊಲೀಸರು 2008 ಜನವರಿ 5 ರಂದು 3:30ರ ಸುಮಾರಿಗೆ ಉಡುಪಿ ತಾಲೂಕು ಕಾಪು ಗ್ರಾಮದ ಲೈಟ್‌ ಹೌಸ್ ಬೀಚಿನ ಬಳಿ ರಾಖಿ ವಿನ್‌’ಸೆಂಟ್ ಡಿ ಸೋಜಾ ಎಂಬಾತನನ್ನು ಪಾಸ್‌ಪೋರ್ಟ್ ಗಳ ಸಮೇತ ವಶಕ್ಕೆ ಪಡೆದು ದಸ್ತಗಿರಿ ಮಾಡಿರುತ್ತಾರೆ.

ಆರೋಪಿತರೆಲ್ಲರೂ ಸೇರಿ ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ವಂಚಿಸಿ ದ್ರೋಹ ಎಸಗಿರುವ ಹಿನ್ನೆಲೆ, ಪಾಸ್‌ ಪೋರ್ಟ್ ಕಾಯ್ದೆಯಡಿ ಉಡುಪಿ ಕರಾವಳಿ ಕಾವಲು ಪಡೆಯ ವೃತ್ತ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ ಪ್ರಧಾನ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶೆ ದೀಪಾ ರವರು ರಾಖಿ ವಿನ್’ ಸೆಂಟ್ ಡಿ ಸೋಜಾಗೆ 3 ವರ್ಷ ಶಿಕ್ಷೆ ಹಾಗೂ 5,000 ರೂ. ದಂಡ, ವಿಜಯ್‌ ರಾವ್ ಮತ್ತುಮಹೇಂದ್ರ ಬಾಬುಗೆ ತಲಾ 1ವರ್ಷ ಜೈಲುಶಿಕ್ಷೆ ಹಾಗೂ 5,000 ರೂ. ದಂಡ ಮತ್ತುಎಲ್ಲಾಆರೋಪಿತರಿಗೆ ಪಾಸ್‌ ಪೋರ್ಟ್ ಕಾಯ್ದೆಯಡಿಯಲ್ಲಿ ತಲಾ 1 ವರ್ಷ ಜೈಲು ಶಿಕ್ಷೆ ಹಾಗೂ ತಲಾ 10,000ರೂ. ದಂಡ ವಿಧಿಸಿ ತೀರ್ಪು ನೀಡಿರುತ್ತಾರೆ.

ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕಿ ಜಯಂತಿ.ಕೆ.ವಾದ ಮಂಡಿಸಿರುತ್ತಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ