ದುರಂತ: ಕಂದಕಕ್ಕೆ ಉರುಳಿದ ಪಿಕಪ್ ಟ್ರಕ್: 18 ಕಾರ್ಮಿಕರು ಸಾವು

ಛತ್ತೀಸ್ ಗಢದ ಕವರ್ಧಾ ಜಿಲ್ಲೆಯ ಕುಕ್ದೂರ್ ಪೊಲೀಸ್ ಠಾಣೆ ಪ್ರದೇಶದ ಬಹಪಾನಿ ಗ್ರಾಮದ ಬಳಿ ಪಿಕಪ್ ವೊಂದು ರಸ್ತೆಯಿಂದ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 18 ಕಾರ್ಮಿಕರು ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ, ಸುಮಾರು 25 ಕಾರ್ಮಿಕರು ಪಿಕಪ್ ಟ್ರಕ್‌ನಲ್ಲಿ ತೆಂಡು ಎಲೆಗಳನ್ನು ಸಂಗ್ರಹಿಸಿ ಹಿಂದಿರುಗುತ್ತಿದ್ದಾಗ ಅದು ಕಂದಕಕ್ಕೆ ಉರುಳಿದೆ. ಈ ದುರಂತದಲ್ಲಿ 14 ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದಂತೆ 15 ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ.
ಈ ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕವರ್ಧಾ ಎಸ್ಪಿ ಅಭಿಷೇಕ್ ಪಲ್ಲವ್ ತಿಳಿಸಿದ್ದಾರೆ.
ಛತ್ತೀಸ್ ಗಢದ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ಸಾಧ್ಯವಿರುವ ಸಹಾಯದ ಭರವಸೆ ನೀಡಿದ್ದಾರೆ.
ಕವರ್ಧಾದಲ್ಲಿ ಕಾರ್ಮಿಕರಿಂದ ತುಂಬಿದ್ದ ಪಿಕ್ ಅಪ್ ವಾಹನ ಪಲ್ಟಿಯಾಗಿ 15 ಜನರು ಸಾವನ್ನಪ್ಪಿದ ಸುದ್ದಿ ಅತ್ಯಂತ ನೋವಿನಿಂದ ಕೂಡಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ನನ್ನ ಸಂತಾಪವಿದೆ. ಇದರೊಂದಿಗೆ, ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಲ್ಲಿ ತೊಡಗಿದೆ ಎಂದು ವಿಜಯ್ ಶರ್ಮಾ ಬರೆದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth