ಚಿಕಿತ್ಸಾಲಯದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ಲೈಂಗಿಕ ಕಿರುಕುಳ: ಮಾಲಿಕ ಸಹಿತ ಮೂವರು ಅರೆಸ್ಟ್ - Mahanayaka
1:36 AM Thursday 13 - February 2025

ಚಿಕಿತ್ಸಾಲಯದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ಲೈಂಗಿಕ ಕಿರುಕುಳ: ಮಾಲಿಕ ಸಹಿತ ಮೂವರು ಅರೆಸ್ಟ್

kadaba news
25/09/2021

ಕಡಬ: ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿ, ಬೆದರಿಕೆಯೊಡ್ಡಿರುವ ಆರೋಪದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕಳಾರದಲ್ಲಿ ನಡೆದಿದೆ.

ಇಲ್ಲಿನ ಸ್ನೇಹಾ ಪಂಚಕರ್ಮ ಚಿಕಿತ್ಸಾಲಯದ ವೈದ್ಯ ಕೇರಳ ಮೂಲದ ವಯನಾಡ್ ನಿವಾಸಿ ಅಬ್ರಹಾಂ, ಅನೀಶ್ ಹಾಗೂ ಇಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷ ವಯಸ್ಸಿನ ಯುವತಿಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಸ್ನೇಹಾ ಆಯುರ್ವೇದಿಕ್ ಪಂಚಕರ್ಮ ಚಿಕಿತ್ಸಾಲಯದ ಹೆಸರಿನಲ್ಲಿ ಕಾರ್ಯಾಚರಿಸುತ್ತಿರುವ ಈ ಮಸಾಜ್ ಪಾರ್ಲರ್ ನಲ್ಲಿ ಕೆಲಸ  ಮಾಡುತ್ತಿದ್ದ ಇಬ್ಬರು ಮಹಿಳೆಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ ಹಿನ್ನೆಲೆಯಲ್ಲಿ ಮಾಲಿಕನ ಸಹಿತ ಮೂವರನ್ನು ಕಡಬ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಚಿಕಿತ್ಸಾಲಯದಲ್ಲಿ ಲೈಂಗಿಕ ಕಿರುಕುಳ ನೀಡಿರುವುದೇ ಅಲ್ಲದೇ ಆತನ ಕೃತ್ಯವನ್ನು ವಿರೋಧಿಸಿದಾಗ ವಿಡಿಯೋ ಮಾಡಿ ಜೀವ ಬೆದರಿಕೆ ಹಾಕಲಾಗಿದೆ ಎಂದು ಇಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರಿಬ್ಬರು ಕಡಬ ಠಾಣೆಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದ್ದು, ಇವರ ದೂರಿನನ್ವಯ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

“ಗದ್ದೆ ನೋಡಲು ಹೋಗೋಣ ಬಾ” ಎಂದು ಪತ್ನಿಯನ್ನು ಕರೆದೊಯ್ದು  ಹತ್ಯೆ ಮಾಡಿದವನಿಗೆ ಜೀವಾವಧಿ ಶಿಕ್ಷೆ

“ಮುಂದಿನ ದಿನಗಳಲ್ಲಿ ವಿಧಾನಸಭೆಯ ಸಭಾಂಗಣವನ್ನು ಮದುವೆ, ಮುಂಜಿಗೂ ಬಾಡಿಗೆಗೆ ಕೊಡಬಹುದು”

ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ: 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ | ಆರೋಪಿ ಅರೆಸ್ಟ್

ನಿದ್ದೆಯಿಂದ ಎಚ್ಚರವಾದ ವೇಳೆ ಆತ ಅತ್ಯಾಚಾರ ನಡೆಸ್ತಿದ್ದ | ಅತ್ಯಾಚಾರಕ್ಕೂ ಮುನ್ನ ಸಂತ್ರಸ್ತೆಯ ವಿಶ್ವಾಸಗಳಿಸಿದ್ದ ಕ್ಯಾಬ್ ಡ್ರೈವರ್!

ಅಸ್ಪೃಶ್ಯತೆ ಜೀವಂತವಿದೆ ಎನ್ನುವುದನ್ನು ಒಪ್ಪಿಕೊಂಡು ಬದಲಾವಣೆಗೆ ಶ್ರಮಿಸಬೇಕು | ಡಿವೈಎಸ್ ಪಿ ರಮೇಶ್

ಅಸ್ಪೃಶ್ಯತೆ ಅನಿಷ್ಟ ಪದ್ಧತಿ ಅದನ್ನು ತೊಲಗಿಸೋಣ | ಗ್ರಾಮಸ್ಥರಿಗೆ ಪ್ರತಿಜ್ಞೆ ಮಾಡಿಸಿದ ಪೊಲೀಸರು

ಇತ್ತೀಚಿನ ಸುದ್ದಿ