ಲಾರಿಯನ್ನು ಓವರ್ ಟೇಕ್ ಮಾಡುವ ವೇಳೆ ಕಾರು ಪಲ್ಟಿ: ನಾಲ್ವರು ಸಾವು - Mahanayaka

ಲಾರಿಯನ್ನು ಓವರ್ ಟೇಕ್ ಮಾಡುವ ವೇಳೆ ಕಾರು ಪಲ್ಟಿ: ನಾಲ್ವರು ಸಾವು

chikkaballapur
01/07/2025


Provided by

ಚಿಕ್ಕಬಳ್ಳಾಪುರ:   ಲಾರಿಯನ್ನು ಓವರ್ ಟೇಕ್ ಮಾಡುವ ವೇಳೆ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರತಾಲೂಕಿನ ಮಾಕಳಿ ಬಳಿ ನಡೆದಿದೆ.

ಮೃತರನ್ನು ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿ ನಿವಾಸಿಗಳಾದ ಕಾಳಪ್ಪ, ಪುರುಷೋತ್ತಮ, ನಾರಾಯಣಪ್ಪ, ಈಶ್ವರಪ್ಪ ಎಂದು ಗುರುತಿಸಲಾಗಿದೆ.

ಬೆಳಗ್ಗೆ ದೇವಸ್ಥಾನಕ್ಕೆಂದು ಇನ್ನೋವಾ ಕಾರಿನಲ್ಲಿ 8 ಮಂದಿ ತೆರಳುತ್ತಿದ್ದರು. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಮೃತದೇಹಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ