ಚಿಕ್ಕಮಗಳೂರು: ಅಮ್ಮ ಬೈದಿದ್ದಕ್ಕೆ ಮನನೊಂದು 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ - Mahanayaka
12:20 PM Monday 16 - February 2026

ಚಿಕ್ಕಮಗಳೂರು: ಅಮ್ಮ ಬೈದಿದ್ದಕ್ಕೆ ಮನನೊಂದು 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

chikkamagaluru
16/02/2026

ಚಿಕ್ಕಮಗಳೂರು: ಸಣ್ಣ ವಿಷಯಕ್ಕೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಕಾಫಿನಾಡಿನಲ್ಲಿ ನಡೆದಿದೆ.

ಘಟನೆಯ ವಿವರ:

ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದ ನಿವಾಸಿ ಸುಪ್ರಿತಾ (13) ಮೃತಪಟ್ಟ ದುರ್ದೈವಿ. ಈಕೆ ಸ್ಥಳೀಯ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.

ಮಧ್ಯಾಹ್ನದ ವೇಳೆ ಸುಪ್ರಿತಾ ಮನೆಯಲ್ಲಿ ಊಟ ಮಾಡುತ್ತಾ ಟಿವಿ ವೀಕ್ಷಿಸುತ್ತಿದ್ದಳು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೈಯಲ್ಲಿದ್ದ ತಟ್ಟೆ ಬಿದ್ದು ಅನ್ನವೆಲ್ಲಾ ನೆಲ ಪಾಲಾಗಿತ್ತು. ಇದನ್ನು ಗಮನಿಸಿದ ತಾಯಿ, “ಯಾವಾಗಲೂ ಟಿವಿ ನೋಡುವುದೇ ಆಯಿತು, ಓದಿನ ಕಡೆ ಗಮನವಿಲ್ಲ. ಮೊದಲು ಚೆಲ್ಲಿರುವ ಅನ್ನವನ್ನು ಸ್ವಚ್ಛ ಮಾಡು” ಎಂದು ಮಗಳಿಗೆ ಬುದ್ಧಿ ಹೇಳಿ ಕೆಲಸಕ್ಕೆ ತೆರಳಿದ್ದರು.

ತಾಯಿಯ ಮಾತಿನಿಂದ ತೀವ್ರವಾಗಿ ಮನನೊಂದ ಬಾಲಕಿ ಸುಪ್ರಿತಾ, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ತನ್ನ ವೇಲ್‌ನಿಂದ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಾಯಿ ಕೆಲಸ ಮುಗಿಸಿ ಮನೆಗೆ ಬಂದಾಗ ಮಗಳ ಸಾವಿನ ಸುದ್ದಿ ತಿಳಿದು ಆಕ್ರಂದನ ಮುಗಿಲು ಮುಟ್ಟಿದೆ.

ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ