ಕಾರು—ಕ್ರೂಸರ್ ನಡುವೆ ಭೀಕರ ಅಪಘಾತ: 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ - Mahanayaka
12:51 PM Wednesday 5 - November 2025

ಕಾರು—ಕ್ರೂಸರ್ ನಡುವೆ ಭೀಕರ ಅಪಘಾತ: 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

chikkamagaluru
06/03/2023

ಚಿಕ್ಕಮಗಳೂರು:  ಕಾರು ಹಾಗೂ ಕ್ರೂಸರ್ ನಡುವೆ ನಡೆದ ಅಪಘಾತದಲ್ಲಿ 10 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ನಡೆದಿದೆ.

ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳು ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಲಬುರುಗಿ ಜಿಲ್ಲೆಯ ಅಫಜಲ್ಪುರದಿಂದ ಪ್ರವಾಸಕ್ಕೆ ಬಂದಿದ್ದ ವಿಧ್ಯಾರ್ಥಿಗಳು,  ಪ್ರವಾಸ ಮುಗಿಸಿ ತಡ ರಾತ್ರಿ ಅಫಜಲ್ಪುರಕ್ಕೆ ತೆರಳುವಾಗ ಘಟನೆ ನಡೆದಿದೆ.

ಕ್ರೂಸರ್ ವಾಹನದಲ್ಲಿ ವಿದ್ಯಾರ್ಥಿಗಳನ್ನು ಶಿಕ್ಷಕರು ಪ್ರವಾದಕ್ಕೆ ಕರೆತಂದಿದ್ದಾರೆ. ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ಮಗುಚಿ ಬಿದ್ದಿದೆ. ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ