ಚಿಕ್ಕಮಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ - Mahanayaka

ಚಿಕ್ಕಮಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

bjp
20/06/2024


Provided by

ಚಿಕ್ಕಮಗಳೂರು:   ತೈಲ ಬೆಲೆ ಏರಿಕೆ ಖಂಡಿಸಿ ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು.

ಪ್ರತಿಭಟನೆ ವೇಳೆ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದರು ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು.

ತಾಲೂಕು ಕಚೇರಿಯಿಂದ ಹನುಮಂತಪ್ಪ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. 5 ದಿನದಲ್ಲಿ ಸರ್ಕಾರದ ವಿರುದ್ಧ ಇದು ಮೂರನೇ ಪ್ರತಿಭಟನೆಯಾಗಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರಲ್ಲದೇ  ಕೂಡಲೇ ತೈಲ ಬೆಲೆ ಇಳಿಸುವಂತೆ ಆಗ್ರಹಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ