ಚಿಕ್ಕಮಗಳೂರು: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಕಂಡು ಪ್ರಯಾಣಿಕರು ಕಂಗಾಲು - Mahanayaka

ಚಿಕ್ಕಮಗಳೂರು: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಕಂಡು ಪ್ರಯಾಣಿಕರು ಕಂಗಾಲು

chikkamagaluru elephant
21/11/2025

ಚಿಕ್ಕಮಗಳೂರು:  ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ಭೀತಿ ಮುಂದುವರಿದಿದೆ.  ಇದೀಗ ಎನ್.ಆರ್.ಪುರ ತಾಲೂಕಿನ ಹಳೇಹಳ್ಳಿ ಸಮೀಪ ಕಾಡಾನೆ ಪ್ರತ್ಯಕ್ಷವಾಗಿದೆ.

ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಒಂಟಿ ಸಲಗವನ್ನು ಕಂಡು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಬಾಳೆಹೊನ್ನೂರು-ಎನ್.ಆರ್.ಪುರ ಸಂಪರ್ಕದ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆ ಪತ್ತೆಯಾಗಿದೆ.  ಕಾಡಾನೆಯನ್ನು ಕಂಡು ಸ್ಥಳೀಯರು  ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ಭಾಗದಲ್ಲಿ ಕಾಡಾನೆಗಳು ನಿರಂತರವಾಗಿ ಸಂಚರಿಸುತ್ತಿದ್ದು, ವಾಹನ ಸವಾರರು ಆತಂಕದಿಂದ ಸಾಗುವಂತಾಗಿದೆ.

ಈ ಭಾಗದಲ್ಲಿ ಸುತ್ತಾಡುತ್ತಿರುವ ಕಾಡಾನೆಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಸಾರ್ವಜನಿಕರು ಮನವಿ  ಮಾಡಿದರೂ ಯಾವುದೇ  ಅರಣ್ಯ ಇಲಾಖೆ ಯಾವುದೇ ಕ್ರಮಕೈಗೊಳ್ತಾ ಇಲ್ಲ ಎನ್ನುವುದು ಸ್ಥಳೀಯರ ಆಕ್ರೋಶವಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ