ಚಿಕ್ಕಮಗಳೂರು: ಮಹಾಮಾರಿ ಕೆ.ಎಫ್.ಡಿ.ಗೆ ಕಾಫಿನಾಡಲ್ಲಿ ಮೊದಲ ಬಲಿ - Mahanayaka

ಚಿಕ್ಕಮಗಳೂರು: ಮಹಾಮಾರಿ ಕೆ.ಎಫ್.ಡಿ.ಗೆ ಕಾಫಿನಾಡಲ್ಲಿ ಮೊದಲ ಬಲಿ

kfd fever
17/03/2025


Provided by

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ಕೆ.ಎಫ್.ಡಿ. (ಕಯಾಸನೂರು ಅರಣ್ಯ ಜ್ವರ) ಮತ್ತೊಮ್ಮೆ ತೀವ್ರತೆ ಹೆಚ್ಚಿಸಿಕೊಂಡಿದ್ದು, 65 ವರ್ಷದ ವೃದ್ಧೆ ಈ ಮಂಗನ ಖಾಯಿಲೆಗೆ ಬಲಿಯಾಗಿದ್ದಾರೆ.

ಘಟನೆಯ ವಿವರ:

ವೃದ್ಧೆ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.  ಜ್ವರ ಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಅವರ ರಕ್ತದ ಮಾದರಿಯನ್ನು ಪರೀಕ್ಷಿಸಿದಾಗ ಕೆ.ಎಫ್.ಡಿ. ಸೋಂಕು ದೃಢಪಟ್ಟಿತು. ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ, ಚಿಕಿತ್ಸೆ ಫಲಿಸದೆ ಕಳೆದ ರಾತ್ರಿ ಮೃತಪಟ್ಟಿದ್ದಾರೆ.

ಬೇಸಿಗೆ ಕಾಲದಲ್ಲಿ ಹಳ್ಳಿಗಳಲ್ಲಿ ಕೆ.ಎಫ್.ಡಿ. ಸೋಂಕು ಹೆಚ್ಚುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ.  ಮುಂಜಾಗ್ರತಾ ಕ್ರಮವಾಗಿ ತೋಟಗಳಿಗೆ ಹೋಗುವಾಗ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

ಕಾಡು ಪ್ರದೇಶಗಳಲ್ಲಿ ಹೆಚ್ಚು ಸಮಯ ಕಳೆದರೆ ಸೋಂಕು ಹಿಡಿಯುವ ಸಾಧ್ಯತೆ ಹೆಚ್ಚಾಗುತ್ತದೆ. ಗ್ರಾಮಸ್ಥರು ಹಾಗೂ ತೋಟ ಕಾರ್ಮಿಕರು ಎಚ್ಚರಿಕೆಯಿಂದ ಇರಬೇಕಾಗಿದ್ದು, ಜ್ವರದ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ಆಸ್ಪತ್ರೆಗೆ ಭೇಟಿ ನೀಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ