ಚಿಕ್ಕಮಗಳೂರು: ಭಾರೀ ಮಳೆ ಹಿನ್ನೆಲೆ 6 ತಾಲೂಕುಗಳ ಶಾಲೆಗಳಿಗೆ ರಜೆ ಜು.4ರಂದು ಘೋಷಣೆ - Mahanayaka

ಚಿಕ್ಕಮಗಳೂರು: ಭಾರೀ ಮಳೆ ಹಿನ್ನೆಲೆ 6 ತಾಲೂಕುಗಳ ಶಾಲೆಗಳಿಗೆ ರಜೆ ಜು.4ರಂದು ಘೋಷಣೆ

rain
03/07/2025

ಚಿಕ್ಕಮಗಳೂರು:   ಮಲೆನಾಡಲ್ಲಿ ಗಾಳಿ–ಮಳೆ ಅಬ್ಬರ ಮುಂದುವರಿದ ಹಿನ್ನೆಲೆ ಜು.4ರಂದು ಜಿಲ್ಲೆಯ 6 ತಾಲೂಕುಗಳ ಶಾಲೆಗಳಿಗೆ  ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಹಾಗೂ ಮೂಡಿಗೆರೆ ತಾಲೂಕಿಗೆ ರಜೆ ಘೋಷಣೆ ಮಾಡಲಾಗಿದೆ.

ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ , ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಮಾಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ತಾಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಮುಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ