ಚಿಕ್ಕಮಗಳೂರು: ರಿವಾಲ್ವರ್‌ ನಿಂದ ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು! - Mahanayaka

ಚಿಕ್ಕಮಗಳೂರು: ರಿವಾಲ್ವರ್‌ ನಿಂದ ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು!

suma
12/06/2026

ಚಿಕ್ಕಮಗಳೂರು: ಜಿಲ್ಲಾ ಕೇಂದ್ರದ ಹಾಲೇನಹಳ್ಳಿಯಲ್ಲಿ ಗೃಹಿಣಿಯೊಬ್ಬರು ರಿವಾಲ್ವರ್‌ ನಿಂದ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ತೀವ್ರ ಕುತೂಹಲ ಹಾಗೂ ಅನುಮಾನಗಳಿಗೆ ಕಾರಣವಾಗಿದೆ.

ನಗರದ ಹಾಲೇನಹಳ್ಳಿಯ ನಿವಾಸಿ, ಸ್ಥಳೀಯ ಉದ್ಯಮಿ ರಾಜೇಶ್ ಎಂಬುವವರ ಪತ್ನಿ ಸುಮ (55) ಮೃತಪಟ್ಟ ದುರ್ದೈವಿ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದಲೇ ಗುಂಡು ಹಾರಿಸಿಕೊಂಡಿರುವುದರಿಂದ ಇದು ಆತ್ಮಹತ್ಯೆ ಇರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.

ಮೃತದೇಹ ಪತ್ತೆಯಾದ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಸುಮ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಶಂಕೆಯನ್ನು ಇದು ಬಲಪಡಿಸಿದೆ. ಆದರೆ, ಸಾವಿಗೆ ನಿಖರವಾದ ಕಾರಣ ಏನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಪೊಲೀಸರು ಈ ಡೆತ್ ನೋಟ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಅದರ ಆಧಾರದ ಮೇಲೆ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಬಸವನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ