ಚಿಕ್ಕಮಗಳೂರಿನ ಐ.ಡಿ.ಎಸ್.ಜಿ. ಸರ್ಕಾರಿ ಕಾಲೇಜಿನಲ್ಲಿ ಮತ್ತೆ ಮುನ್ನೆಲೆಗೆ ಬಂದ ಹಿಜಾಬ್ ವಿವಾದ

hijab
11/08/2023

ಚಿಕ್ಕಮಗಳೂರು:  ಚಿಕ್ಕಮಗಳೂರಿನ ಐ.ಡಿ.ಎಸ್.ಜಿ. ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಕ್ಲಾಸ್ ರೂಂನಲ್ಲಿ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಕುಳಿತಿರುವ ವಿಡಿಯೋ ವೈರಲ್ ಹಿನ್ನೆಲೆ ಎಚ್ಚೆತ್ತುಕೊಂಡ ಕಾಲೇಜು ಆಡಳಿತ ಮಂಡಳಿ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯ ಎಂದು ಆದೇಶ ನೀಡಿದೆ.

ವಾರದ 6 ದಿನವೂ ಸಮವಸ್ತ್ರ ಧರಿಸಬೇಕೆಂದು ಕಾಲೇಜು ಆದೇಶ ನೀಡಿದ್ದು, ಸಮವಸ್ತ್ರ ಧರಿಸದ ವಿದ್ಯಾರ್ಥಿಗಳಿಗೆ ಕಾಲೇಜು ಆವರಣ ಪ್ರವೇಶಕ್ಕೆ ನಿಷೇಧಿಸಿದೆ.

ಸಮವಸ್ತ್ರ ಧರಿಸಿ ಐಡಿ ಕಾರ್ಡ್ ತೋರಿಸಿಯೇ ತರಗತಿಗೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ. ನಿನ್ನೆ ಮೊದಲ ವರ್ಷದ ವಿದ್ಯಾರ್ಥಿನಿ ಹಿಜಬ್ ಧರಿಸಿ ಕಾಲೇಜಿಗೆ ಬಂದಿದ್ದರು. ಶಿಕ್ಷಕರ ಸೂಚನೆ ಮೇರೆಗೆ ವಿದ್ಯಾರ್ಥಿನಿ ಹಿಜಬ್ ತೆಗೆದಿದ್ದರು ಎನ್ನಲಾಗಿದೆ. ಕಾಲೇಜು ಆಡಳಿತ ಮಂಡಳಿಯ ಆದೇಶದ ಬೆನ್ನಲ್ಲೇ  ವಿವಾದ ಬಗೆಹರಿದಿದೆ.

ಇತ್ತೀಚಿನ ಸುದ್ದಿ

Exit mobile version