ಕಾಂಗ್ರೆಸ್ ಗ್ರಾ.ಪಂ. ಸದಸ್ಯನನ್ನು ಕೊಚ್ಚಿ ಬರ್ಬರ ಹತ್ಯೆ: ಐವರು ಬಿಜೆಪಿ ಪರ ಸಂಘಟನಾ ಕಾರ್ಯಕರ್ತರ ಬಂಧನ! - Mahanayaka
11:24 AM Saturday 6 - December 2025

ಕಾಂಗ್ರೆಸ್ ಗ್ರಾ.ಪಂ. ಸದಸ್ಯನನ್ನು ಕೊಚ್ಚಿ ಬರ್ಬರ ಹತ್ಯೆ: ಐವರು ಬಿಜೆಪಿ ಪರ ಸಂಘಟನಾ ಕಾರ್ಯಕರ್ತರ ಬಂಧನ!

ganesh gowda kadur
06/12/2025

ಚಿಕ್ಕಮಗಳೂರು: ಕಾಂಗ್ರೆಸ್ ನ ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ.

ಗಣೇಶ್ (38) ಹತ್ಯೆಗೀಡಾದವರಾಗಿದ್ದಾರೆ. 2 ಗುಂಪುಗಳ ನಡುವಿನ ಮಾರಾಮಾರಿಯ ನಂತರ  ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಗೂ ಮುನ್ನ ಸಖರಾಯಪಟ್ಟಣ ಬಾರ್ ಬಳಿ ಗಲಾಟೆಯಾಗಿತ್ತು, ಬಾರ್ ಬಳಿ ಗಲಾಟೆಯಾದ ಅರ್ಧ ಗಂಟೆ ಬಳಿಕ ಮಠದ ಬಳಿ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯಗೊಂಡಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಇಬ್ಬರ ತಲೆಗೆ ಗಂಭೀರವಾಗಿ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಕೊಲೆಯಾದ ಗಣೇಶ್, ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖರಾಗಿ ಗುರುತಿಸಿಕೊಂಡಿದ್ದರು. ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿ ಕೂಡ ಆಗಿದ್ದರು ಎಂದು ತಿಳಿದು ಬಂದಿದೆ.

ದತ್ತಜಯಂತಿ ವಿಚಾರದಲ್ಲಿ ಗಲಾಟೆ?

ಸಖರಾಯಪಟ್ಟಣದಲ್ಲಿ ಎರಡು ದಿನಗಳ ಹಿಂದೆ ದತ್ತ ಜಯಂತಿ ಬ್ಯಾನರ್ ತೆರವು ವಿಚಾರದಲ್ಲಿ ಎರಡು ತಂಡಗಳ ನಡುವೆ ಗಲಾಟೆ ನಡೆದಿತ್ತು. ಇದೇ ವಿಚಾರಕ್ಕೆ ಶುಕ್ರವಾರ ಸಖರಾಯಪಟ್ಟಣದ ಬಾರ್ ಬಳಿ ಗಲಾಟೆಯಾಗಿತ್ತು. ಇದಾಗಿ ಅರ್ಧಗಂಟೆಯ ನಂತರ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ಗಣೇಶ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ವರದಿಗಳ ಪ್ರಕಾರ ಗಣೇಶ್ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ನಲ್ಲಿ ಅಡ್ಡಗಟ್ಟಿ 8 ಮಂದಿಯಿದ್ದ ಹಂತಕರ ತಂಡ ಬರ್ಬರವಾಗಿ ಹತ್ಯೆ ಮಾಡಿದೆ ಎಂದು ತಿಳಿದು ಬಂದಿದೆ.

ಐವರ ಬಂಧನ:

ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದ್ದು, ಬಂಧಿತರ ಬಿಜೆಪಿ ಮತ್ತು ಬಿಜೆಪಿ ಪರ ಸಂಘಟನೆ ಬಜರಂಗದಳದ ಕಾರ್ಯಕರ್ತರು ಎನ್ನಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ