ಬೈಕ್ ಕದ್ದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ! - Mahanayaka

ಬೈಕ್ ಕದ್ದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ!

kaduru
26/12/2022

ಚಿಕ್ಕಮಗಳೂರು: ರಾತ್ರೋ ರಾತ್ರಿ ಬೈಕ್ ಎಗರಿಸಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕಡೂರು ಸಿಪಿಐ ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ.

ಕಡೂರು ತಾಲ್ಲೂಕಿನ ಶೆಟ್ಟಿಹಳ್ಳಿಯ ಮೋಹನ್ ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ  4 ಲಕ್ಷ ರೂ. ಮೌಲ್ಯದ 11 ಬೈಕ್ ವಶಪಡಿಸಿಕೊಳ್ಳಲಾಗಿದೆ.

ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಹಿನ್ನೆಲೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಈ ಬಗ್ಗೆ  ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಮೋಹನ್ ಕುರಿತು ಸುಳಿವು ಲಭ್ಯವಾಗಿತ್ತು. ಕಾರ್ಯಾಚರಣೆ ನಡೆಸಿದ ಪೊಲೀಸರು ಈತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ ತನಿಖೆ ನಡೆಸಿದ ವೇಳೆ ಬೆಂಗಳೂರು, ತುಮಕೂರು ಸೇರಿ ವಿವಿಧ ಜಿಲ್ಲೆಯ 11 ಪ್ರಕರಣ ಬಯಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ