ಚಿಕ್ಕಮಗಳೂರು: ಕಾಫಿನಾಡಲ್ಲಿ ಅಳಿಯನಿಂದಲೇ ಅತ್ತೆಯ ಕೊಲೆ - Mahanayaka

ಚಿಕ್ಕಮಗಳೂರು: ಕಾಫಿನಾಡಲ್ಲಿ ಅಳಿಯನಿಂದಲೇ ಅತ್ತೆಯ ಕೊಲೆ

shashidhar
17/02/2025

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ಅಳಿಯನಿಂದ ಅತ್ತೆಯ ಕೊಲೆ ನಡೆದಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.

ಘಟನೆ ವಿವರ:

65 ವರ್ಷದ ಯಮುನಾ ಎಂಬುವವರನ್ನು ಅವರ ಅಳಿಯ ಶಶಿಧರ್‌ ಕೊಲೆ ಮಾಡಿದ್ದಾನೆ. ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ಬಳಿಕ ಶಶಿಧರ್ ಪರಾರಿಯಾಗಿದ್ದಾನೆ.

ಈ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.  ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಪರಾರಿಯಾಗಿರುವ ಶಶಿಧರ್‌ ನ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಕೊಲೆಯ ಹಿಂದಿನ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Provided by
Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ