ಕಾಡುಕೋಣ ದಾಳಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬಲಿ

ಚಿಕ್ಕಮಗಳೂರು: ಜಿಲ್ಲೆ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ಕಾಡುಕೋಣದ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ದುರ್ಘಟನೆ ಸಂಭವಿಸಿದೆ.
ಮೃತ ದುರ್ದೈವಿ ರಮೇಶ್ (52) ಎಂಬವರಾಗಿದ್ದು, ಅವರು ತೋಟದಲ್ಲಿ ಕೆಲಸ ನಿರ್ವಹಿಸುತ್ತಿರುವ ವೇಳೆ ಕಾಡುಕೋಣ ದಾಳಿ ನಡೆಸಿದೆ.
ಇತ್ತೀಚೆಗಿನ ದಿನಗಳಲ್ಲಿ ಮೂಡಿಗೆರೆ–ಕಳಸ ಭಾಗದಲ್ಲಿ ಕಾಡುಕೋಣಗಳ ತಿರುಗಾಟ ಹೆಚ್ಚಾಗಿದ್ದು, ಇದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ. ಈ ಪ್ರದೇಶದಲ್ಲಿ ವಾಸವಿರುವ ಜನತೆ ತಮ್ಮ ದೈನಂದಿನ ಕೃಷಿ ಹಾಗೂ ತೋಟದ ಕೆಲಸಗಳಲ್ಲಿ ತೊಡಗಿಕೊಳ್ಳುವಲ್ಲಿ ಆತಂಕ ಹೊಂದಿದ್ದಾರೆ.
ಘಟನೆಯ ನಂತರ ಬಾಳೂರು ಠಾಣೆ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಡು ಪ್ರಾಣಿಗಳ ದಾಳಿಗೆ ಶಾಶ್ವತ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸ್ಥಳೀಯರು ಕಾಡುಕೋಣ ದಾಳಿಗೆ ಶಾಶ್ವತ ಬ್ರೇಕ್ ಹಾಕುವಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: