ಮಳೆ ಅಂತ ಶಾಲೆಗೆ ರಜೆ ಕೊಟ್ರೆ… ಕೆರೆಯಲ್ಲಿ ಈಜಲು ಹೋಗಿ ಪ್ರಾಣ ಕಳೆದುಕೊಂಡ ಬಾಲಕ

ಚಿಕ್ಕಮಗಳೂರು: ಜೋರು ಮಳೆಯಿಂದ ಶಾಲೆಗೆ ರಜೆ ನೀಡಲಾಗಿದ್ದರೆ, ಇಲ್ಲೊಬ್ಬ ಬಾಲಕ ಶಾಲೆಗೆ ರಜೆ ಎಂದು ಈಜಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿದ್ದಾನೆ.
ಹೌದು..! ಚಿಕ್ಕಮಗಳೂರು ತಾಲೂಕಿನ ಬ್ಯಾಗಡೇಹಳ್ಳಿ ಗ್ರಾಮದ 15 ವರ್ಷದ ಬಾಲಕ ರಂಜಿತ್ ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದಾನೆ.
ಚಿಕ್ಕಮಗಳೂರು ನಗರದ ಕುಂಬಾರಕಟ್ಟೆ ಕೆರೆಯಲ್ಲಿ ಈ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬ್ಯಾಗಡೇಹಳ್ಳಿ ಗ್ರಾಮದ ಬಾಲಕ ರಂಜಿತ್ ಶಾಲೆಗೆ ಬಂದಿದ್ದ. ಮಳೆ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿಗೆ ಜಿಲ್ಲಾಡಳಿಯ ರಜೆ ನೀಡಿತ್ತು. ಶಾಲೆಗೆ ರಜೆ ಹಿನ್ನೆಲೆ ರಂಜಿತ್ ಕೆರೆಯಲ್ಲಿ ಈಜಲು ತೆರಳಿದ್ದು, ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಶವ ಪತ್ತೆ ಮಾಡಿ, ಕೆರೆಯಿಂದ ಹೊರ ತೆಗೆದಿದ್ದಾರೆ. ಘಟನೆ ಸಂಬಂಧ ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ನಗರದ ಉಪ್ಪಳ್ಳಿ ಸಮೀಪದ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD