ಹೃದಯಾಘಾತ: ಕುಳಿತಲ್ಲೇ ಸಾವನ್ನಪ್ಪಿದ ಸೆಕ್ಯೂರಿಟಿ ಗಾರ್ಡ್

29/06/2025
ಚಿಕ್ಕಮಗಳೂರು: ಸೆಕ್ಯೂರಿಟಿ ಗಾರ್ಡ್ ವೊಬ್ಬರು ಕರ್ತವ್ಯದಲ್ಲಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿರೋ ಶೋ ರೂಂನಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಹಿರೇಗೌಜದ ಶಿವಮೂರ್ತಿ (50) ಮೃತಪಟ್ಟವರಾಗಿದ್ದಾರೆ. ಇವರು ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿರೋ ಬೈಕ್ ಶೋರೂಂ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.
ಬೈಕ್ ಶೋ ರೂಂ ನಲ್ಲಿ ಕೆಲಸ ಮಾಡ್ತಿದ್ದಾಗ ಕುಳಿತ ಜಾಗದಲ್ಲೇ ಹೃದಯಾಘಾತವಾಗಿದ್ದು, ಅವರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD