ಚಿಕ್ಕಮಗಳೂರು | ಉರುಸ್ ಹಬ್ಬದ ಹಿನ್ನೆಲೆ: ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ - Mahanayaka

ಚಿಕ್ಕಮಗಳೂರು | ಉರುಸ್ ಹಬ್ಬದ ಹಿನ್ನೆಲೆ: ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ

chikkamagaluru
13/03/2025

ಚಿಕ್ಕಮಗಳೂರು: ಜಿಲ್ಲಾಡಳಿತವು ಮಾರ್ಚ್ 15 ರಿಂದ 17 ರವರೆಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ. ಈ ನಿರ್ಬಂಧವು ಚಂದ್ರದ್ರೋಣ ಪರ್ವತ ಸರಣಿಯ ಪ್ರಮುಖ ಪ್ರವಾಸಿ ತಾಣಗಳಾದ ದತ್ತಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರಾ ಮತ್ತು ಝರಿಫಾಲ್ಸ್ ಗೆ ಅನ್ವಯಿಸುತ್ತದೆ.


Provided by

ದತ್ತಪೀಠದಲ್ಲಿ ನಡೆಯಲಿರುವ ಉರುಸ್ ಹಬ್ಬದ ಹಿನ್ನೆಲೆಯಲ್ಲಿ ಭಕ್ತಾದಿಗಳ ಹೆಚ್ಚಿನ ಸಂಖ್ಯೆಯ ನಿರೀಕ್ಷೆಯಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ವ್ಯವಸ್ಥೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಆದಾಗ್ಯೂ, ಗಿರಿಸಾಲೆಯ ಹೊಂಸ್ಟೇ ಮತ್ತು ರೆಸಾರ್ಟ್ಗಳಲ್ಲಿ ಈಗಾಗಲೇ ಬುಕ್ಕಿಂಗ್ ಮಾಡಿರುವ ಪ್ರವಾಸಿಗರಿಗೆ ಮಾತ್ರ ಪ್ರವೇಶವನ್ನು ಅನುಮತಿಸಲಾಗಿದೆ.


Provided by

ಸ್ಥಳೀಯ ನಿವಾಸಿಗಳಿಗೆ ಈ ನಿರ್ಬಂಧ ಅನ್ವಯಿಸುವುದಿಲ್ಲ. ಉರುಸ್ ಹಬ್ಬಕ್ಕೆ ಆಗಮಿಸುವ ಭಕ್ತಾದಿಗಳ ಭಾರೀ ವಾಹನಗಳ ಸಂಚಾರವನ್ನು ಕೂಡ ನಿರ್ಬಂಧಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

 

ಇತ್ತೀಚಿನ ಸುದ್ದಿ