ಜೈಲಿನಲ್ಲಿ ದರ್ಶನ್ ಭೇಟಿಯಾಗಿದ್ದಕ್ಕೆ ಮತ್ತೆ ವಿಚಾರಣೆಗೆ ಹಾಜರಾದ ಚಿಕ್ಕಣ್ಣ!

chikana
29/08/2024

ಬೆಂಗಳೂರು: ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ಚಿಕ್ಕಣ್ಣ ಭೇಟಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿಗೆ ಚಿಕ್ಕಣ್ಣ ವಿಚಾರಣೆಗೆ ಹಾಜರಾಗಿದ್ದಾರೆ.

ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಾಕ್ಷಿದಾರನಾಗಿದ್ದುಕೊಂಡು ದರ್ಶನ್ ಅವರನ್ನು ಮಾತನಾಡಿಸ ಬಾರದು ಎನ್ನುವುದು ಗೊತ್ತಿರಲಿಲ್ಲ. ಹಾಗಾಗಿ ಭೇಟಿ ಮಾಡಿ ಬಂದಿದ್ದೆ. ಇದರಿಂದಾಗಿ ಮತ್ತೆ ವಿಚಾರಣೆ ಬರುವಂತೆ ನಿನ್ನೆ ನೋಟಿಸ್ ನೀಡಿದ್ದರು. ಇಂದು ವಿಚಾರಣೆಗೆ ಹಾಜರಾಗಿದ್ದೇನೆ ಎಂದು ಚಿಕ್ಕಣ್ಣ ಹೇಳಿದರು.

ವಿಚಾರಣೆಯ ವೇಳೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರ ಬಗ್ಗೆ ಒಂದಷ್ಟು ಪ್ರಶ್ನೆ ಕೇಳಿದ್ದರು. ಅದಕ್ಕೆ ಉತ್ತರ ಕೊಟ್ಟಿದ್ದೀನಿ. ಮತ್ತೆ ಅವರು ವಿಚಾರಣೆಗೆ ಕರೆದರೆ ಬರುತ್ತೇನೆ. ಸದ್ಯ ವಿಚಾರಣೆಗೆ ಬರುವುದಕ್ಕೆ ಹೇಳಿಲ್ಲ ಎಂದು ಚಿಕ್ಕಣ್ಣ ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version