6 ನಕ್ಸಲರ ಶರಣಾಗತಿಗೆ ಕ್ಷಣಗಣನೆ: ನಾಳೆಯೇ ನಡೆಯಲಿದೆಯೇ ಶರಣಾಗತಿ ಪ್ರಕ್ರಿಯೆ
ಚಿಕ್ಕಮಗಳೂರು: ನಕ್ಸಲ್ ನಾಯಕ ವಿಕ್ರಂಗೌಡನ ಎನ್ ಕೌಂಟರ್ ಬೆನ್ನಲ್ಲೇ ಕಾಫಿನಾಡ ಕಾಡಲ್ಲಿ ಆಲ್ ಮೋಸ್ಟ್ ನಕ್ಸಲರ ಯುಗಾಂತ್ಯವಾಗಿದೆ. ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ 6 ನಕ್ಸಲರ ಶರಣಾಗತಿಗೆ ಕ್ಷಣಗಣನೆ ಆರಂಭವಾಗಿದೆ.
ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ನಕ್ಸಲರು ಶರಣಾಗತಿ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯದ ಮಾಹಿತಿಗಳ ಪ್ರಕಾರ ಮಾಜಿ ನಕ್ಸಲ್ ನೂರ್ ಜುಲ್ಫಿಕರ್ ಶ್ರೀಧರ್ ನೇತೃತ್ವದಲ್ಲಿ ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿದಂತೆ ಪ್ರಮುಖರು ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ.
ವನಜಾಕ್ಷಿ, ಸುಂದರಿಣ ಮಾರೆಪ್ಪ, ವಸಂತ, ಜೀಶ್ ಶರಣಾಗಲಿರುವ ಇತರ ನಕ್ಸಲರು ಎಂದು ಹೇಳಲಾಗಿದೆ. ಸರ್ಕಾರ ರಚನೆ ಮಾಡಿರುವ ಜಿಲ್ಲಾ ಕಮಿಟಿ ಮುಂದೆ ಇವರು ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಶಾಂತಿಗಾಗಿ ನಾಗರೀಕ ವೇದಿಕೆಯ ಅಡಿಯಲ್ಲಿ ನಕ್ಸಲರು ಶರಣಾಗತಿ ನಡೆಯಲಿದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್, ಎಸ್.ಪಿ.ವಿಕ್ರಮ ಅಮಟೆ ಮುಂದೆ ನಕ್ಸಲರು ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: