ನೀರು ತುಂಬಿದ ಟಬ್ ನೊಳಗೆ ಬಿದ್ದು ಮಗು ಸಾವು

ಚನ್ನಪಟ್ಟಣ: ನೀರು ತುಂಬಿದ ಟಬ್ ನೊಳಗೆ ಬಿದ್ದು 11 ತಿಂಗಳ ಮಗು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರದ ಜೀವನ್ ಪುರ ನಗರದಲ್ಲಿ ನಡೆದಿದೆ.
ಶಂಷಾದ್ ಪಠಾಣ್ ಮತ್ತು ಮುಸ್ಕಾನ್ ದಂಪತಿಗಳ ನಾಲ್ಕನೇ ಪುತ್ರಿ ಖುಷಿ ಮೃತ ಮಗು ಎಂದು ಗುರುತಿಸಲಾಗಿದೆ. ಮನೆ ಒರೆಸಲೆಂದು ಟಬ್ ಗೆ ನೀರು ತುಂಬಿಸಿಡಲಾಗಿತ್ತು. ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ಟಬ್ ಗೆ ಬಿದ್ದು ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಮಗುವಿನ ತಂದೆ ಹೊಟೇಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ದಿನ ಕೆಲಸ ಮುಗಿಸಿ ಮನೆಗೆ ಬಂದಿದ್ದ ತಂದೆ ಶಂಷಾದ್, ತನ್ನ ಪತ್ನಿ ಮುಸ್ಕಾನ್ ಬಳಿ ಕುಡಿಯಲು ನೀರು ಕೇಳಿದ್ದರು. ಮುಸ್ಕಾನ್ ನೀರು ತರಲೆಂದು ಒಳಗೆ ಹೋದ ವೇಳೆ ಆಟವಾಡುತ್ತಿದ್ದ ಮಗು ಟಬ್ ನೊಳಗೆ ಬಿದ್ದಿದೆ. ಪರಿಣಾಮವಾಗಿ ತೀವ್ರ ಅಸ್ವಸ್ಥಗೊಂಡಿದ್ದ ಮಗುವನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಆದರೆ, ಮಗು ಅಷ್ಟರಲ್ಲೇ ಕೊನೆಯುಸಿರೆಳೆದಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಚನ್ನಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD