ವಾಂತಿಯಾಗಿರುವ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಮಗು ಸಾವು: ವೈದ್ಯರ ನಿರ್ಲಕ್ಷ್ಯದ ಆರೋಪ

ಮೈಸೂರು: ವಾಂತಿ ಆಗಿರುವ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಸಾವನ್ನಪ್ಪಿದ್ದು, ಘಟನೆಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿದ ಘಟನೆ ಹೆಚ್.ಡಿ ಕೋಟೆಯ ಸೇಂಟ್ ಮೆರಿಸ್ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದೆ.
ಜಿಲ್ಲೆಯ ಬೆಳಗನಹಳ್ಳಿ ಗ್ರಾಮದ ಶಿವರಾಜ್ ದಂಪತಿಯ ಪುತ್ರಿ ತನುಷ್ಕಾ (7) ಮೃತಪಟ್ಟ ಬಾಲಕಿಯಾಗಿದ್ದಾಳೆ. ಮಗುವಿಗೆ ವಾಂತಿಯಾದ ಕಾರಣ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು.
ವಾಂತಿಯಾದರೂ ಮಗು ಲವಲವಿಕೆಯಿಂದಲೇ ಇತ್ತು. ಆದರೆ ನೈಟ್ ಶಿಫ್ಟ್ ನಲ್ಲಿದ್ದ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಮಗು ದಿಢೀರ್ ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಮಗು ಸಾವನ್ನಪ್ಪಿದ ಬೆನ್ನಲ್ಲೇ ಮಗುವಿನ ಪೋಷಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟಿಸಿದರು. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಟಿ.ಹೆಚ್.ಓ ರವಿಕುಮಾರ್ ಆಗಮಿಸಿದ್ದು, ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97