'ಮದುವೆ' ಸಂಭ್ರಮದಲ್ಲಿ ಸಾವಿನ ನರ್ತನ: ಟ್ರಕ್ ನದಿಗೆ ಬಿದ್ದು ಐವರು ದುರ್ಮರಣ - Mahanayaka
10:35 PM Friday 12 - December 2025

‘ಮದುವೆ’ ಸಂಭ್ರಮದಲ್ಲಿ ಸಾವಿನ ನರ್ತನ: ಟ್ರಕ್ ನದಿಗೆ ಬಿದ್ದು ಐವರು ದುರ್ಮರಣ

28/06/2023

ವಧುವಿನ ಕುಟುಂಬದವರನ್ನು ಕರೆದೊಯ್ಯುತ್ತಿದ್ದ ಟ್ರಕ್ ನದಿಗೆ ಬಿದ್ದು, ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ದುರ್ಘಟನೆ ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ನಡೆದಿದೆ.

ಕಳೆದ ರಾತ್ರಿ ಟ್ರಕ್​ ಬುಹಾರಾ ಗ್ರಾಮವನ್ನು ತಲುಪಿದಾಗ ಟ್ರಕ್ ಆಯ ತಪ್ಪಿಗೆ ನದಿಗೆ ಬಿದ್ದಿದೆ. ಮೂವರು ಮಕ್ಕಳು ಸೇರಿದಂತೆ ಐವರು ಮೃತಪಟ್ಟಿದ್ದಾರೆ. 65 ವರ್ಷದ ಮಹಿಳೆ, 18 ವರ್ಷದ ಪುರುಷ ಹಾಗೂ ಎರಡು-ಮೂರು ವರ್ಷದೊಳಗಿನ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ರಕ್ಷಣೆ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿಕೆ ನೀಡಿದ್ದಾರೆ.

ಇಪ್ಪತ್ನಾಲ್ಕು ಜನರು ಗಾಯಗೊಂಡಿದ್ದಾರೆ ಮತ್ತು ಅಪಘಾತದ ನಂತರ ಹಲವಾರು ಮಕ್ಕಳು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಮೃತರು ಗ್ವಾಲಿಯರ್‌ನ ಬಿಲ್ಹೇಟಿ ಗ್ರಾಮದ ನಿವಾಸಿಗಳಾಗಿದ್ದು, ಮದುವೆ ಕಾರ್ಯಕ್ರಮಕ್ಕಾಗಿ ಟಿಕಮ್‌ಗಢಕ್ಕೆ ತೆರಳಿದ್ದರು. ಅಪಘಾತ ಸ್ಥಳದ ದೃಶ್ಯಗಳು ನದಿ ದಡದ ಬಳಿ ಟ್ರಕ್ ಉರುಳಿಬಿದ್ದಿರುವುದನ್ನು ತೋರಿಸುತ್ತವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ