1 ದಿನ ಪೊಲೀಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಕ್ಯಾನ್ಸರ್ ನಿಂದ ಹೋರಾಡುತ್ತಿರುವ ಮಕ್ಕಳು - Mahanayaka

1 ದಿನ ಪೊಲೀಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಕ್ಯಾನ್ಸರ್ ನಿಂದ ಹೋರಾಡುತ್ತಿರುವ ಮಕ್ಕಳು

police
05/02/2025

ಬೆಂಗಳೂರು: ವಿಶ್ವ ಕ್ಯಾನ್ಸರ್ ದಿನಾಚರಣೆ ಹಿನ್ನೆಲೆ, ಬೆಂಗಳೂರು ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ನಾಲ್ಕು ಮಕ್ಕಳಿಗೆ 1 ದಿನಗಳ ಕಾಲ ಪೊಲೀಸ್ ಆಗಿ ಕರ್ತವ್ಯ ಸಲ್ಲಿಸಲು ಅವಕಾಶ ನೀಡಲಾಯಿತು.

ನಗರ ಪೊಲೀಸರು, ಪರಿಹಾರ ಸಂಸ್ಥೆ ಮತ್ತು ಕಿದ್ವಾಯಿ ಮೆಮೋರಿಯಲ್‌ ಇನ್‌ ಸ್ಟಿಟ್ಯೂಟ್‌ ಆಫ್ ಆಂಕೋಲಾಜಿ ಸಹಯೋಗದಲ್ಲಿ ಕ್ಯಾನ್ಸರ್‌ ದಿನಾಚರಣೆಯನ್ನು ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ವಿಶೇಷವಾಗಿ ಆಚರಿಸಲಾಯಿತು.

ಕ್ಯಾನ್ಸರ್‌ ನಿಂದ ಬಳಲುತ್ತಿರುವ 12 ರಿಂದ 14 ವರ್ಷದೊಳಗಿನ ವಿಶ್ವಾಸ್‌, ಜೀವನ್‌ ಕುಮಾರ್‌, ದಾನಮ್ಮ ಮತ್ತು ದಿವ್ಯಶ್ರೀ ಪೊಲೀಸ್‌ ಸಮವಸ್ತ್ರ ಧರಿಸಿ ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ಆಗಮಿಸಿ 1 ದಿನದ ಮಟ್ಟಿಗೆ ಪೊಲೀಸ್‌ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು.

ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಅವರು, ಖುದ್ದು ಈ ನಾಲ್ವರು ಮಕ್ಕಳಿಗೆ ಹೂಗುಚ್ಛ ನೀಡಿ ತಮ್ಮ ಕಚೇರಿಗೆ ಸ್ವಾಗತಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ