ಏಕಲವ್ಯ ವಸತಿ ಶಾಲೆಯಲ್ಲಿ ಮಕ್ಕಳಿಗೆ ಥಳಿತ: ಜಾತಿ ನಿಂದನೆ ಆರೋಪದಡಿ ಪ್ರಾಂಶುಪಾಲ, ಸಿಬ್ಬಂದಿ ವಿರುದ್ಧ ಪ್ರಕರಣ

23/03/2026

ಕೊಟ್ಟಿಗೆಹಾರ: ಸಮೀಪದ ತರುವೆ ಏಕಲವ್ಯ ವಸತಿ ಶಾಲೆಯಲ್ಲಿ ಮಕ್ಕಳಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ.

ನಿನ್ನೆ ನಡೆದ ಘಟನೆಯಲ್ಲಿ, ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ಥಳಿತ ನಡೆಸಿರುವುದರ ಜೊತೆಗೆ ಜಾತಿ ನಿಂದನೆ ಮಾಡಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲ ಸತೀಶ್ ಪ್ರಸಾದ್ ಜೈಸ್ವಾಲ್ ಹಾಗೂ ಸಿಬ್ಬಂದಿ ಶುಭಂ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವಿದ್ಯಾರ್ಥಿ ಪ್ರೀತಮ್ ಅವರ ತಂದೆ, ಕಡೂರು ಮೂಲದ ರಮೇಶ್ ನಾಯಕ್ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ಬಹಿರಂಗವಾಗುತ್ತಿದ್ದಂತೆ ಸ್ಥಳೀಯರು ಹಾಗೂ ಪೋಷಕರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version